ಜೈಲಿನಿಂದಲೇ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧೆ
ಬೆಳಗಾವಿ : ಮೇ 3ರಂದು ನಡೆಯಲಿರುವ ಬೆಳಗಾವಿ ಮಹಾ ನಗರಪಾಲಿಕೆ ಚುನಾವಣೆಗೆ ಜೈಲಿನಲ್ಲಿರುವ ಸಂಜಯ ಸುಂಠಕರ್ ಎಂಬ ಅಭ್ಯರ್ಥಿ ಸ್ಪರ್ಧಿಸಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್ 56ರಿಂದ ಸ್ಪರ್ಧಿಸಿರುವ ಕುಖ್ಯಾತ ರೌಡಿ ಸಂಜಯ ಸುಂಠಕರ್ ಜೈಲಿನಲ್ಲಿದುಕೊಂಡೇ ಸ್ಪರ್ಧಿಸಲು ಸ್ಫೂರ್ತಿ ಯಾರು ಗೊತ್ತೆ ? ಶಾಸಕ ರವಿಕಾಂತ ಪಾಟೀಲ್. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇಂಡಿ ಕ್ಷೇತ್ರದಿಂದ ಸ್ಪರ್ಧಿಸಿ, ಶಾಸಕರಾಗಿ ಆಯ್ಕೆಯಾದ ರವಿಕಾಂತ್ ಪಾಟೀಲ್ ಆಗ ಸೊಲ್ಲಾಪುರ ಜೈಲಿನಲ್ಲಿದ್ದುಕೊಂಡೇ ಚುನಾವಣೆಗೆ ಸ್ಪರ್ಧಿಸಿದ್ದರು.
ಈ ಸ್ಫೂರ್ತಿಯಿಂದ ಕಣಕ್ಕಿಳಿದಿರುವ ಸುಂಠಕರ್ ನಗರ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಲು ತಮ್ಮ ವಕೀಲರ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಹಲವಾರು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಅವರು, ಈಗ ಬೆಳಗಾವಿ ಹೊರವಲಯದ ಜೈಲಿನಲ್ಲಿದ್ದಾರೆ. ಸುಂಠಕರ್ ಜೈಲಿನಲ್ಲಿದ್ದರೂ, ಅವರ ಪರ ಭರದ ಪ್ರಚಾರ ನಡೆಯುತ್ತಿದೆ.
ಈ ಬಾರಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿರುವ 20ಕ್ಕೂ ಹೆಚ್ಚು ಅಭ್ಯರ್ಥಿಗಳು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ ಎನ್ನುವುದು ವಿಶೇಷ.
ತಮಿಳುನಾಡು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಎಐಡಿಎಂಕೆ ನಾಯಕಿ ಜಯಲಲಿತಾ ಅವರು ನಾಲ್ಕು ಕ್ಷೇತ್ರಗಳಲ್ಲಿ ಸಲ್ಲಿಸಿದ್ದ ನಾಮಪತ್ರಗಳನ್ನೂ ಭ್ರಷ್ಟಾಚಾರ ಹಗರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ ಎಂಬ ಕಾರಣಕ್ಕಾಗಿ ತಿರಸ್ಕರಿಸಲಾಗಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications