ಚಾರ್ಮಾಡಿಯಲ್ಲಿ ಒಂಟಿ ಸಲಗನ ಕಾಟ : ಸರಕಾರಕ್ಕೆ ಮೊರೆ
ಮಂಗಳೂರು : ಬೆಳ್ತಂಗಡಿ ಸಮೀಪದ ಚಾರ್ಮಾಡಿ ಗ್ರಾಮದಲ್ಲಿ ಒಂಟಿ ಸಲಗದ ಮತ್ತೆ ಹಾವಳಿ ಮಾಡುತ್ತಿದ್ದು, ಬಾಳೆಯ ತೋಟಗಳನ್ನು ನಾಶ ಮಾಡುತ್ತಿದೆ. ಆನೆಯ ಕಾಟದಿಂದ ಕಂಗೆಟ್ಟಿರುವ ಗ್ರಾಮಸ್ಥರು ಅಪಾಯದಿಂದ ಪಾರುಮಾಡುವಂತೆ ಸರಕಾರದ ಮೊರೆ ಹೊಕ್ಕಿದ್ದಾರೆ.
ರಾತ್ರಿಯ ವೇಳೆ ಅರಣ್ಯ ಪ್ರದೇಶದಿಂದ ಊರಿಗೆ ನುಗ್ಗುತ್ತಿರುವ ಈ ಒಂಟಿ ಸಲಗ, ಎದೆನಡುಗುವಂತೆ ಗೀಳು ಹಾಕುತ್ತಾ, ಚಾರ್ಮಾಡಿ ಘಾಟ್ ಅಂಚಿನಲ್ಲಿರುವ ಗ್ರಾಮಗಳಲ್ಲಿ ರಾಜಾರೋಷವಾಗಿ ಓಡಾಡುತ್ತಿದೆ. ಹಲಸಿನ ಮರಗಳನ್ನು, ತೆಂಗಿನ ಮರಗಳನ್ನು ಹಾಗೂ ಬಾಳೆಯ ತೋಟಗಳನ್ನು ನೆಲಸಮ ಮಾಡುತ್ತಿದೆ.
ಡೋೕಲು, ತಮಟೆ, ಕೊಂಬು, ಕಹಳೆಯ ಶಬ್ದಕ್ಕೂ ಜಗ್ಗದ ಈ ಆನೆಯನ್ನು ಓಡಿಸುವುದೇ ಗ್ರಾಮಸ್ಥರಿಗೆ ಒಂದು ತಲೆನೋವಾಗಿ ಪರಿಣಮಿಸಿದೆ.
ಶಬ್ದಕ್ಕೆ ಹೆದರಿ ಕೆಲಕಾಲ ಮರೆಯಾಗುವ ಆನೆ, ಮತ್ತೆ ತೋಟಗಳಿಗೆ ದಾಳಿ ಇಡುತ್ತಿದೆ. ಬೆಳ್ತಂಗಡಿ ವಿಭಾಗದ ಅರಣ್ಯಾಧಿಕಾರಿಗಳು ಆನೆಯ ಉಪಟಳದಿಂದ ಗ್ರಾಮಸ್ಥರನ್ನು ಪಾರು ಮಾಡುವ ಭರವಸೆ ನೀಡಿದ್ದಾರೆ. ಗ್ರಾಮಸ್ಥರ ದೂರಿನ ಮೇರೆಗೆ ತಹಶೀಲ್ದಾರರು ಗ್ರಾಮಕ್ಕೆ ಬಂದು, ಆನೆಯಿಂದ ಆಗಿರುವ ಹಾನಿಯ ಪರಿಶೀಲನೆ ನಡೆಸಿದರು. ಆನೆ ಓಡಿಸಲು ಅರಣ್ಯ ಇಲಾಖೆಯು ಗ್ರಾಮದಲ್ಲಿ ಸಿಬ್ಬಂದಿಯನ್ನು ನಿಯೋಜಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications