‘ನಿಗದಿತ ಕಕ್ಷೆ ಸೇರದ ಜಿಸ್ಯಾಟ್-1 ಕಡಿಮೆ ಕೆಲಸ ಮಾಡುತ್ತದಷ್ಟೆ’
ಬೆಂಗಳೂರು : ಇಂಧನ ಕೊರತೆಯಿಂದಾಗಿ ನಿಗದಿತ ಕಕ್ಷೆಗಿಂತ ಒಂದು ಸಾವಿರ ಕಿಲೋ ಮೀಟರ್ ಹಿಂದೆಯೇ ನಿಂತು ಕೆಲಸ ಆರಂಭಿಸಲಿರುವ ಜಿಸಾಟ್- 1, ಮೂರು ವರ್ಷಗಳ ಅವಧಿಯಲ್ಲಿ ಯಾವುದೇ ಕೆಲಸ ಮಾಡುವುದಿಲ್ಲ ಎಂದೇನಿಲ್ಲ ಎಂದು ಇಸ್ರೋ ಮೂಲಗಳು ಹೇಳಿವೆ.
ಕೆಲಸಗಳೆಲ್ಲವೂ ಸ್ಥಗಿತವಾಗುವುದಿಲ್ಲ. ಬದಲಾಗಿ ಪೂರೈಸಬೇಕಿದ್ದ ಜವಾಬ್ದಾರಿಗಳಲ್ಲಿ ಕೆಲವನ್ನು ಮಾತ್ರವಷ್ಟೇ ಉಪಗ್ರಹ ನಿರ್ವಹಿಸಲಿದೆ ಎಂದು ಇಸ್ರೋದ ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.
ಇಂಧನ ಕೊರತೆಯಿಂದ ಆಗಿರುವ ತೊಂದರೆಯನ್ನು ಸಾಧ್ಯವಾದಷ್ಟು ಸರಿಪಡಿಸಲಾಗಿದೆ. ಪ್ರಸ್ತುತ ಜಿಸಾಟ್- 1 ಭೂಮಿಯಿಂದ 35,665 ಕಿಲೋ ಮೀಟರ್ ಎತ್ತರದಲ್ಲಿದೆ. ಭೂಮಿ ಸುತ್ತುವ ಆರ್ಬಿಟಲ್ ರೇಟ್ 24 ಗಂಟೆಗೆ ಬದಲಾಗಿ 23 ಗಂಟೆ 2 ನಿಮಿಷಗಳಾಗಿರುತ್ತವೆ ಎಂದು ಇಸ್ರೋ ಅಧ್ಯಕ್ಷ ಡಾ. ಕೆ. ಕಸ್ತೂರಿ ರಂಗನ್ ಹೇಳಿದ್ದಾರೆ.
ಹಾಸನದಲ್ಲಿರುವ ಇಸ್ರೋದ ಮಾಸ್ಟರ್ ಕಂಟ್ರೋಲ್ ಕೇಂದ್ರದಿಂದ ಉಪಗ್ರಹವನ್ನು ತಿಂಗಳಲ್ಲಿ ಹತ್ತು ದಿನ ವೀಕ್ಷಿಸಲಾಗುವುದು. ಅಲ್ಲದೆ ಭವಿಷ್ಯದಲ್ಲಿನ ಉಡ್ಡಯನಕ್ಕೆ ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಾಗುವುದು ಎಂದೂ ಕಸ್ತೂರಿ ರಂಗನ್ ವಿವರಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications