ಹಂಪಿ ಸೇರಿದಂತೆ ರಾಜ್ಯದ ಸ್ಮಾರಕಗಳ ರಕ್ಷಣೆಗೆ ಕೇಂದ್ರದ ಯೋಜನೆ
ನವದೆಹಲಿ : ವಿಶ್ವ ವಿಖ್ಯಾತ ಹಂಪಿ, ಪಟ್ಟದಕಲ್ಲು ಸೇರಿದಂತೆ ಕರ್ನಾಟಕ ಪ್ರಾಚ್ಯವಸ್ತು ಇಲಾಖೆ ವ್ಯಾಪ್ತಿಯಲ್ಲಿರುವ 504 ಸ್ಮಾರಕಗಳ ರಕ್ಷಣೆಗೆ 2001-02ನೇ ಸಾಲಿನಲ್ಲಿ 2.33 ಕೋಟಿ ರುಪಾಯಿ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಅನಂತಕುಮಾರ್ ತಿಳಿಸಿದ್ದಾರೆ.
ಹಂಪಿಯ ಮ್ಯಾಗಜಿನ್ ಕಟ್ಟಡದಲ್ಲಿರುವ ವಸ್ತುಸಂಗ್ರಹಾಲಯ, ಗಾರ್ಡ್ಹೌಸ್ ವಸ್ತು ಸಂಗ್ರಹಾಲಯ ಹಾಗೂ ದಾವಣಗೆರೆ ಜಿಲ್ಲೆಯ ಬಗ್ಲಿ ವಸ್ತು ಸಂಗ್ರಹಾಲಯಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಯೂ ಇದೆ. ಸುಂದರ ಶಿಲ್ಪಕಲೆಯಿಂದ ಕೂಡಿದ ಹಂಪಿಯ ಪಟ್ಟಾಭಿರಾಮ ದೇವಸ್ಥಾನ, ರಾಣಿಯ ಸ್ನಾನಗೃಹ ಕಮಲಮಹಲ್ ಆವರಣದಲ್ಲಿ ಈಗಾಗಲೇ 2 ಉದ್ಯಾನಗಳನ್ನು ನಿರ್ಮಿಸಲಾಗಿದೆ ಎಂದು ಅವರು ರಾಜ್ಯಸಭೆಯಲ್ಲಿ ತಿಳಿಸಿದರು.
ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೂಡ ಕ್ರಮ ಕೈಗೊಳ್ಳಲಾಗಿದೆ. ಹಂಪಿಯ ಸಮಗ್ರ ಮಾಹಿತಿ ನೀಡುವ ಸಿ.ಡಿ. ರಾಮ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ ಅನಂತಕುಮಾರ್, ಈ ಹಿಂದೆ ಆನೆಗೊಂದಿ ಸೇತುವೆಗೆ ಸಂಬಂಧಿಸಿದಂತೆ ಯುನೆಸ್ಕೋ ಆಕ್ಷೇಪಣೆ ವ್ಯಕ್ತಪಡಿಸಿತ್ತು. ಕರ್ನಾಟಕ ಸರಕಾರ ಸೇತುವೆಯನ್ನು ಕಿತ್ತುಹಾಕುವ ಭರವಸೆ ಕೊಟ್ಟ ನಂತರ ಯುನೆಸ್ಕೋ ಹಂಪಿಯ ಸಮಗ್ರ ಅಭಿವೃದ್ಧಿಗೆ ಮೊದಲ ಸಮೀಕ್ಷಾ ವರದಿ ಸಿದ್ಧಪಡಿಸಿದೆ ಎಂದೂ ವಿವರಿಸಿದರು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications