ಹೆಲ್ಮೆಟ್ ಕಡ್ಡಾಯಕ್ಕೆ ಡಾ. ಸುದರ್ಶನ್ ಸಮಿತಿ ಶಿಫಾರಸು
ಬೆಂಗಳೂರು: ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ಕಡ್ಡಾಯ ಮಾಡಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸಚಿವಾಲಯದವರೆಗೆ ಆರೋಗ್ಯ ಇಲಾಖೆ ಪುನಾರಚಿಸಿ, ಭ್ರಷ್ಟಾಚಾರ ತಡೆಗಟ್ಟಬೇಕು, ಹೊಸ ವೈದ್ಯ ಕಾಲೇಜುಗಳಿಗೆ ಕಡಿವಾಣ ಹಾಕಬೇಕು, ವೈದ್ಯ ಕಾಲೇಜು ಸ್ಥಾಪಿಸುವಾಗ ಪ್ರಾದೇಶಿಕ ಅಸಮಾನತೆ ನಿವಾರಿಸಬೇಕು ಎಂಬಿತ್ಯಾದಿ 500 ಶಿಫಾರಸುಗಳನ್ನು ಡಾ. ಸುದರ್ಶನ್ ನೇತೃತ್ವದ ಆರೋಗ್ಯ ಕಾರ್ಯಪಡೆ ಮಾಡಿದೆ.
ಇಲಾಖೆಗೆ ಮೀಸಲಿಟ್ಟಿರುವ ಹಣ, ವಿಶ್ವಬ್ಯಾಂಕ್‌ನಿಂದ ಬರುವ ನೆರವು ಸದ್ಬಳಕೆ ಆಗಬೇಕು, ಪೂರ್ಣ ತರಬೇತಿ ಹೊಂದಿದೆ ತಜ್ಞ ವೈದ್ಯರ ನೇಮಕ ಮಾಡಬೇಕು, ಶಾಲಾ ಮಕ್ಕಳಿಗೆ ಆರೋಗ್ಯ ಶಿಕ್ಷಣ ನೀಡಬೇಕು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಸುದರ್ಶನ ನೇತೃತ್ವದ ಸಮಿತಿ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದೆ.
1999ರ ಡಿಸೆಂಬರ್ ತಿಂಗಳಿನಲ್ಲಿ ರಾಜ್ಯ ಸರಕಾರವು ಆರೋಗ್ಯ ಕ್ಷೇತ್ರದ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಕೋರಿ ಇಂಟರ್‌ನ್ಯಾಷನಲ್ ರೈಟ್ ಲೈವ್ಲಿಹುಡ್ ಡಾ. ಸುದರ್ಶನ್ ಅವರ ನೇತೃತ್ವದಲ್ಲಿ ಆರೋಗ್ಯ ಕಾರ್ಯಪಡೆ ರಚಿಸಿತ್ತು.
ಸುದೀರ್ಘ ಅಧ್ಯಯನದ ನಂತರ ವರದಿ ಸಿದ್ಧಪಡಿಸಿದ ಡಾ. ಸುದರ್ಶನ್ ಅವರು ಬುಧವಾರ ಮುಖ್ಯಮಂತ್ರಿ ಕೃಷ್ಣ ಅವರಿಗೆ ವರದಿ ಸಲ್ಲಿಸಿದರು. ಆನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ದಿನೇ ದಿನೇ ಹೆಚ್ಚುತ್ತಿರುವ ಅಪಘಾತಗಳಲ್ಲಿ ತಲೆಗೆ ಪೆಟ್ಟುಬಿದ್ದು ಸಾಯುತ್ತಿರುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರುತ್ತಿರುವ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವಂತೆ ಶಿಫಾರಸು ಮಾಡಲಾಗಿದ್ದು, ಮುಖ್ಯಮಂತ್ರಿಗಳು ತಾತ್ವಿಕವಾಗಿ ಒಪ್ಪಿದ್ದಾರೆ ಎಂದರು.
ಸಾಕಷ್ಟು ವೈದ್ಯಕೀಯ ಕಾಲೇಜುಗಳು ಕರ್ನಾಟಕದಲ್ಲಿದ್ದು, ಹೊಸ ಕಾಲೇಜುಗಳ ಅಗತ್ಯ ಇಲ್ಲ ಎಂದ ಅವರು, ಕಾಲೇಜು ಮಂಜೂರಾತಿಯ ಸಂದರ್ಭದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಗಮನ ಹರಿಸುವಂತೆ ಶಿಫಾರಸು ಮಾಡಲಾಗಿದೆ ಎಂದೂ ಹೇಳಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications