ಉದ್ಯಾನ ಪ್ರವೇಶ ಶುಲ್ಕ ಕೈಬಿಟ್ಟುಉಸಿರು ಪಡೆದ ಬೆಂ.ಮ.ನ.ಪಾ.
ಬೆಂಗಳೂರು : ಸಾರ್ವಜನಿಕರ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಉದ್ಯಾನವನಗಳಿಗೆ ಪ್ರವೇಶ ಶುಲ್ಕ ವಿಧಿಸುವ ತೀರ್ಮಾನವನ್ನು ಮಹಾನಗರ ಪಾಲಿಕೆ ಕೈಬಿಟ್ಟಿದೆ. ಅದೇ ರೀತಿ 100 ಜೀಪುಗಳನ್ನು ಕೊಳ್ಳುವ ಉದ್ದೇಶದಿಂದ ಹಿಂದೆ ಸರಿದಿರುವ ಪಾಲಿಕೆ, ಹೆಪಟೈಟಿಸ್-ಬಿ ಕಾಯಿಲೆ ನಿರೋಧಕ್ಕೆ 25 ಲಕ್ಷ ರುಪಾಯಿಗಳನ್ನು ಬಿಡುಗಡೆ ಮಾಡಿದೆ.
ಪಾಲಿಕೆಯ ಆಯವ್ಯಯ ಪತ್ರದ ಮೇಲೆ ಮೂರು ದಿನಗಳಿಂದ ನಡೆಯುತ್ತಿರುವ ಚರ್ಚೆಯ ಸಂದರ್ಭದಲ್ಲಿ , 2001- 2002 ಸಾಲಿನ ಆಯವ್ಯಯದಲ್ಲಿ ಪ್ರಸ್ತಾಪಿಸಿದ್ದ ಉದ್ಯಾನಗಳ ಪ್ರವೇಶ ಶುಲ್ಕವನ್ನು ಕೈ ಬಿಡುವ ಅಗತ್ಯವನ್ನು ಆಡಳಿತ ಪಕ್ಷ ದ ಸದಸ್ಯರು ಮನಗಂಡಿದ್ದಾರೆ. ಇದೇರೀತಿ 50 ರುಪಾಯಿಗಳಿಂದ 250 ರು.ಗೆ ಏರಿಸಿದ್ದ ವಿದ್ಯುತ್ ಚಿತಾಗಾರದ ಶುಲ್ಕವನ್ನು 100 ರು.ಗೆ ಇಳಿಸಲಾಗಿದೆ. ಇದರಿಂದಾಗಿ ಪಾಲಿಕೆಯ ಬಜೆಟ್ ಅಂಗೀಕಾರದ ಹಾದಿ ಸುಗಮಗೊಂಡಿದೆ.
ಪಾಲಿಕೆ ತೆಗೆದುಕೊಂಡಿರುವ ಮತ್ತೊಂದು ಮಹತ್ವದ ನಿರ್ಣಯದಲ್ಲಿ ಕಾರ್ಯ ನಿರ್ವಾಹಕ ಅಭಿಯಂತರರಿಗಿಂತ ಕೆಳದರ್ಜೆಯ ಅಧಿಕಾರಿಗಳಿಗೆ ನೀಡಿದ್ದ ವಾಹನ ಸೌಲಭ್ಯವನ್ನು ವಾಪಸ್ಸು ಪಡೆಯಲಾಗಿದೆ. ನಗರದ ನಾಗರಿಕರು ಹಾಗೂ ಬಿಜೆಪಿ ನಾಯಕರು ಉದ್ಯಾನಗಳಿಗೆ ಪ್ರವೇಶ ಶುಲ್ಕ ವಿಧಿಸುವ ಪಾಲಿಕೆಯ ನಿರ್ಧಾರವನ್ನು ತೀವ್ರವಾಗಿ ಪ್ರತಿಭಟಿಸಿದ್ದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಕರ್ನಾಟಕ ಸಿಲಿಕಾನ್ ಕಣಿವೆ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications