ಹೆಜ್ಜೆಗೆ ಅಡ್ಡಬರುವ ದೇವಸ್ಥಾನಗಳಮುಲಾಜಿಲ್ಲದೆ ಕೆಡವಿ - ಕೃಷ್ಣ
ಬೆಂಗಳೂರು : ಯಾರ ದಾಕ್ಷಿಣ್ಯಕ್ಕೂ ಒಳಗಾಗದೆ ನಗರದ ರಸ್ತೆಗಳ ಕಾಲುದಾರಿಗಳಲ್ಲಿ ನಿರ್ಮಿಸಿರುವ ದೇವಸ್ಥಾನಗಳನ್ನು ಧ್ವಂಸ ಮಾಡುವಂತೆ ಬೆಂಗಳೂರು ಮಹಾನಗರ ಪಾಲಿಕೆಗೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸ್ಪಷ್ಟ ಸೂಚನೆ ನೀಡಿದ್ದಾರೆ.
ನಗರದ ಮೇಯರ್ ಪ್ರೇಮಾ ಕಾರಿಯಪ್ಪ ಹಾಗೂ ಆಯುಕ್ತ ಅಶೋಕ್ ದಳವಾಯಿ ಅವರ ಜೊತೆ ಶುಕ್ರವಾರ ನಡೆಸಿದ ಮಾತುಕತೆಯ ಸಂದರ್ಭದಲ್ಲಿ ಕೃಷ್ಣ ಈ ಸೂಚನೆ ನೀಡಿದ್ದಾರೆ. ಫುಟ್ಪಾತ್ ಮೇಲೆ ಕಟ್ಟಡ ಕಟ್ಟುವುದು ಕಾನೂನು ವಿರುದ್ಧವಾದುದು. ಇಂಥಾ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಿ, ಓಡಾಡುವವರಿಗೆ ಮುಕ್ತ ಹಾದಿಗಳನ್ನು ಒದಗಿಸಬೇಕೆಂದು ಕೃಷ್ಣ ತಿಳಿಸಿದರು.
ಒಳಚರಂಡಿ, ಮೋರಿಗಳನ್ನು ಸ್ವಚ್ಛಗೊಳಿಸಿ ಮಳೆಯ ನೀರು ಸರಾಗವಾಗಿ ಹರಿದುಹೋಗುವಂತೆ ಮಾಡಲು, ತಗ್ಗಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಲು ಹಾಗೂ ಮಳೆ ಹಾವಳಿಗೆ ನಗರ ತುತ್ತಾಗದಂತೆ ಜರೂರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಪಾಲಿಕೆಗೆ ಅವರು ಸೂಚಿಸಿದರು. ಆಮೆ ಗತಿಯಲ್ಲಿ ಸಾಗುತ್ತಿರುವ ಆಪ್ಟಿಕಲ್ ಕೇಬಲ್ ಕಾಮಗಾರಿಯನ್ನು ತ್ವರಿತಗೊಳಿಸುವಂತೆ ಹಾಗೂ ಕೇಬಲ್ ಅಳವಡಿಕೆಯನ್ನು ಶೀಘ್ರ ಕೊನೆಗೊಳಿಸಲು ಸಂಬಂಧಿಸಿದವರಿಗೆ ಎಚ್ಚರಿಕೆ ನೀಡುವಂತೆ ಕೃಷ್ಣ ಸೂಚಿಸಿದರು.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications