5 ರಾಜ್ಯಗಳ ಚುನಾವಣೆಗೆ ಬಿ.ಇ.ಎಲ್‌ನ 66,900 ಮತಯಂತ್ರ
ಬೆಂಗಳೂರು : ಸಾರ್ವಜನಿಕ ವಲಯದ ಉದ್ದಿಮೆ ಬಿ.ಇ.ಎಲ್. (ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್) 2000-01ನೇ ಸಾಲಿನಲ್ಲಿ 1715 ಕೋಟಿ ರುಪಾಯಿಗಳ ದಾಖಲೆ ವಹಿವಾಟು ನಡೆಸಿದೆ. ಈ ವಿಷಯವನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಕೆ. ಕೋಶಿ ಅವರು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ.
ಕಂಪನಿಯು ತೆರಿಗೆ ಪಾವತಿಗೆ ಮುನ್ನ 199.89 ಕೋಟಿ ರುಪಾಯಿ ಲಾಭ ಗಳಿಸಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ, ಇದು ಶೇ. 24.4ರಷ್ಟು ಪ್ರಗತಿ ಸಾಧಿಸಿದೆ. ಮುಂದಿನ ಆರ್ಥಿಕ ವರ್ಷಕ್ಕೆ ಅಂದರೆ, 2001-02ರ ಸಾಲಿಗೆ 1800 ಕೋಟಿ ರುಪಾಯಿ ವಹಿವಾಟಿನ ಗುರಿಹೊಂದಲಾಗಿದೆ.
ಮತಯಂತ್ರ : ಮೇ ತಿಂಗಳಿನಲ್ಲಿ 5 ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಬಳಕೆಗಾಗಿ ಬಿ.ಇ.ಎಲ್. 66,900 ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಒದಗಿಸಿದೆ. ಕೇವಲ ಮೂರೇ ತಿಂಗಳ ಅವಧಿಯಲ್ಲಿ ಇಷ್ಟು ಎಲೆಕ್ಟ್ರಾನಿಕ್ ಮತಯಂತ್ರ ಪೂರೈಸಿದ ಖ್ಯಾತಿಯೂ ಸಂಸ್ಥೆಯದಾಗಿದೆ ಎಂದು ಕೋಶಿ ತಿಳಿಸಿದ್ದಾರೆ.
ವಾಹನಗಳ ಸಂಚಾರದ ಜಾಡು ಹಿಡಿಯುವ ರಾಷ್ಟ್ರಮಟ್ಟದ ನಿಯಂತ್ರಣ ವ್ಯವಸ್ಥೆಯಾಂದನ್ನು ಸಹ ಸಂಸ್ಥೆ ಅಭಿವೃದ್ಧಿಪಡಿಸುತ್ತಿದೆ. ಕರ್ನಾಟಕ ಹಾಗೂ ಆಂಧ್ರಪ್ರದೇಶ ಸಂಚಾರಿ ಪೊಲೀಸರು ಈ ವ್ಯವಸ್ಥೆಯ ಲಾಭ ಪಡೆಯಲು ಮುಂದಾಗಿದ್ದಾರೆ. ಮಾನವ ರಹಿತ ರೈಲ್ವೆ ಲೆವೆಲ್ ಕ್ರಾಸಿಂಗ್‌ಗಳಲ್ಲಿ ರೈಲು ಬರುವ ಸೂಚನೆ ನೀಡುವ ಯಂತ್ರ, ವಾಯುನೆಲೆ ರಕ್ಷಣಾ ಶಸ್ತ್ರಾಸ್ತ್ರ ನಿಯಂತ್ರಣ ರೆಡಾರ್, ಕರಾವಳಿ ನಿಗಾ ವ್ಯವಸ್ಥೆ, ರಾತ್ರಿ ವೇಳೆಯಲ್ಲೂ ಶತ್ರುಗಳ ಶಸ್ತ್ರಾಸ್ತ್ರ ಹಾಗೂ ಉಪಕರಣ ಪತ್ತೆ ಹಕ್ಷಿಚ್ಚುವ ನೈಟ್ ವೆಪನ್ ಸೈಟ್ ಮತ್ತು ಕುಗ್ರಾಮಗಳಲ್ಲೂ ಖಾಸಗಿ ಎಫ್.ಎಂ. ರೇಡಿಯೋ ಕೇಂದ್ರ ಸ್ಥಾಪನೆಗೆ ಅನುವಾಗುವ ಟ್ರಾನ್ಸ್‌ಮೀಟರ್ ಅಭಿವೃದ್ಧಿಯೇ ಮೊದಲಾದ ಹತ್ತು ಹಲವು ಹೊಸ ಯೋಜನೆಗಳನ್ನು ಬಿ.ಇ.ಎಲ್. ಕೈಗೊಂಡಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications