ತೆಹಲ್ಕಾ : ಉರುಳಿದ ಮತ್ತೊಂದು ವಿಕೆಟ್,ಎನ್.ಕೆ. ಸಿಂಗ್ ಎತ್ತಂಗಡಿ
ನವದೆಹಲಿ : ಸಂಘ ಪರಿವಾರಗಳ ಒತ್ತಡಕ್ಕೆ ಕೊನೆಗೂ ಮಣಿದಿರುವ ಪ್ರಧಾನಿ, ರಕ್ಷಣಾ ಅವ್ಯವಹಾರಗಳಲ್ಲಿ ತೆಹಲ್ಕಾ ಬೆಟ್ಟು ಮಾಡಿದ್ದ ವಿಶೇಷ ಕರ್ತವ್ಯಾಧಿಕಾರಿ ಎನ್.ಕೆ. ಸಿಂಗ್ ಅವರನ್ನು ತಮ್ಮ ಕಾರ್ಯಾಲಯದಿಂದ ಎತ್ತಂಗಡಿ ಮಾಡಲು ಒಪ್ಪಿಕೊಂಡಿದ್ದಾರೆ.
ಪ್ರಧಾನಿ ಕಾರ್ಯಾಲಯದಿಂದ ಸಿಂಗ್ ಅವರನ್ನು ಯೋಜನಾ ಆಯೋಗದ ಸದಸ್ಯರನ್ನಾಗಿ ಶುಕ್ರವಾರ ವರ್ಗಾಯಿಸಲಾಗಿದೆ. ಮೋಂಟೆಕ್ ಸಿಂಗ್ ಅಹ್ಲುವಾಲಿಯಾ ನಿವೃತ್ತಿಯಿಂದ ತೆರವಾಗಿದ್ದ ಹುದ್ದೆಯನ್ನು ಸಿಂಗ್ ಅವರಿಗೆ ಸೂಚಿಸಲಾಗಿದೆ. 1964 ರ ಐಎಎಸ್ ತಂಡದ ಸಿಂಗ್ ಅವರು ಕಳೆದ ಜನವರಿ 31 ರಂದೇ ನಿವೃತ್ತರಾಗಿದ್ದರೂ, ಆರ್ಥಿಕ ವ್ಯವಹಾರಗಳನ್ನು ನೋಡಿಕೊಳ್ಳುವ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ಅವರನ್ನು ಪ್ರಧಾನಿ ನೇಮಿಸಿಕೊಂಡಿದ್ದರು.
ಎರಡೂವರೆ ವರ್ಷಗಳ ಕಾಲ ದೇಶದ ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಸಿಂಗ್ ಮಹತ್ತರ ಪಾತ್ರ ವಹಿಸಿದ್ದರು. ಪ್ರಧಾನಿಗಳ ಆಪ್ತ ಬಳಗದಲ್ಲಿ ಗುರ್ತಿಸಿಕೊಂಡಿದ್ದ ಸಿಂಗ್ ಅವರನ್ನು ಹುದ್ದೆಯಿಂದ ಎತ್ತಂಗಡಿ ಮಾಡಬೇಕೆಂದು ತೆಹಲ್ಕಾ ಪ್ರಕರಣದ ಹಿನ್ನೆಲೆಯಲ್ಲಿ ಸಂಘ ಪರಿವಾರ ಹಾಗೂ ವಿರೋಧ ಪಕ್ಷಗಳು ವಾಜಪೇಯಿ ಅವರನ್ನು ಒತ್ತಾಯಿಸಿದ್ದವು. ಕೆಲವು ಮಿತ್ರಪಕ್ಷಗಳು ಕೂಡ ಸಿಂಗ್ ಅವರನ್ನು ಕೈ ಬಿಡುವಂತೆ ಪ್ರಧಾನಿ ಅವರನ್ನು ಒತ್ತಾಯಿಸಿದ್ದವು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications