ಮತ್ತೆ ತಟ್ಟಿದೆ ಬೇಸಿಗೆಯ ಬಿಸಿ
ಬೆಂಗಳೂರು : ಏಪ್ರಿಲ್ ತಿಂಗಳಿನಲ್ಲಿ ಅಕಾಲಿಕವಾಗಿ ಸುರಿದ ದಾಖಲೆಯ ಮಳೆ ನಿಂತು ವಾರಗಳೇ ಕಳೆದರೂ ರಾಜ್ಯಾದ್ಯಂತ ಒಳಚರಂಡಿಗಳಿಂದ ಉಕ್ಕಿ ಹರಿಯುತ್ತಿರುವ ನೀರು ಮಾತ್ರ ನಿಂತಿಲ್ಲ. ಹಳ್ಳ ಕೊಳ್ಳಗಳಿಂದ ಕೂಡಿದ ರಸ್ತೆಯಲ್ಲಿ ನೀರು ನಿಂತೇ ಇದೆ.
ಬೆಂಗಳೂರಿನಲ್ಲಿ ಬಾಯ್ತೆರೆದ ಮ್ಯಾನ್‌ಹೋಲ್‌ಗಳಿಂದ ಹೊಲಸು ನೀರು ಉಕ್ಕಿ ರಸ್ತೆಗಳಲ್ಲಿ ಹರಿಯುತ್ತಿದೆ. ಬಿ.ವಿ.ಕೆ. ಅಯ್ಯಂಗಾರ್ ರಸ್ತೆ ಕೊಳಚೆ ನೀರಿನಲ್ಲಿ ಮುಳುಗಿಹೋಗಿದೆ. ತಗ್ಗು ಪ್ರದೇಶಗಳಲ್ಲಿ ಹಾಗೂ ಹಳ್ಳಗಳಿರುವ ಸ್ಥಳದಲ್ಲಿ ನಿಂತ ಮಳೆಯ ನೀರು ಕೊಳೆತು ನಾರುತ್ತಿದೆ. ಸೊಳ್ಳೆಗಳ ಆಶ್ರಯ ತಾಣವಾಗಿದೆ.
ಈ ಮಧ್ಯೆ ಬೆಂಗಳೂರಿನಲ್ಲಿ ಬಿಸಿಲು ಏರಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ತಲುಪಿತ್ತು. ಶನಿವಾರ ಕೂಡ ಸುಡು ಬಿಸಿಲಿನ ಅನುಭವ ಆಯಿತು. ಮೋಡ, ಮಳೆ ಇಲ್ಲದ ನಿರ್ಮಲ ನೀಲಾಕಾಶದಲ್ಲಿ ಪ್ರಜ್ವಲಿಸುತಿಹ ಸೂರ್ಯ ಮತ್ತೆ ಬೇಸಿಗೆಯ ಬಿಸಿಯನ್ನು ಭೂಮಿಗೆ ತಟ್ಟಿಸಿಹ.
ರಾಜ್ಯದ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆ ಆಗಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಇತ್ತು. ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಅಧಿಕವಾಗಿದ್ದರೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಅಲ್ಪ ಬದಲಾವಣೆ ಆಗಿತ್ತು.
ಉತ್ತರ ಒಳನಾಡು ಹಾಗೂ ಕರಾವಳಿಯ ಅನೇಕ ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಾಗಿತ್ತು. ರಾಜ್ಯದ ಅತಿ ಹೆಚ್ಚು ತಾಪಮಾನ 43ಡಿಗ್ರಿ ಸೆಲ್ಸಿಯಸ್ ಗುಲ್ಬರ್ಗಾದಲ್ಲಿ ದಾಖಲಾಗಿತ್ತು. ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ.
ಮುಂದಿನ 48 ಗಂಟೆಗಳ ಅವಧಿಯಲ್ಲಿ ರಾಜ್ಯದ ಒಟ್ಟಾರೆ ತಾಪಮಾನದಲ್ಲಿ ಅಂತಹ ಹೆಚ್ಚಿನ ಬದಲಾವಣೆಗಳೇನೂ ಕಂಡುಬರುವುದಿಲ್ಲ. ಸ್ಥಳೀಯ ಹವಾಮಾನ ಮುನ್ಸೂಚನೆಯಂತೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ದಿನದ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ತಲುಪುವ ಸೂಚನೆ ಇದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications