ಅವಳಿನಗರದಲ್ಲಿ ಭಾರೀ ಮಳೆ, ಸಿಡಿಲಬಡಿತಕ್ಕೆ ಇಬ್ಬರು ಬಲಿ
ಧಾರವಾಡ : ಅವಳಿನಗರಗಳಲ್ಲಿ ಶನಿವಾರ ಸಂಜೆ ಭಾರೀ ಮಳೆ ಸುರಿದಿದ್ದು , ಇಬ್ಬರು ವ್ಯಕ್ತಿಗಳು ಸಿಡಿಲ ಹೊಡೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿ ತಾಲ್ಲೂಕಿನ ಹಳ್ಯಾಳ ಗ್ರಾಮದಲ್ಲಿ ಕುರಿ ಮೇಯಿಸುತ್ತಿದ್ದ ಯಲ್ಲವ್ವ ಮಾರುತಿ ಕಾರಗೋಳ (25) ಹಾಗೂ ಧಾರವಾಡದ ತೇಜಸ್ವಿನಗರದ ರಾಮು ನಬೀಸಾಬ ತಡಕಲ್ (36) ಸಾವಿಗೀಡಾದ ದುರ್ದೈವಿಗಳು. ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು , ತನಿಖೆ ನಡೆಸುತ್ತಿದ್ದಾರೆ. ಇಮ್ತಿಯಾಜ್ ಬಾಗಲಕೋಟೆ ಎನ್ನುವ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ.
ಧೋ ಎಂದು ಸುರಿದ ಆಲಿಕಲ್ಲು ಮಳೆಯಿಂದಾಗಿ ಧಾರವಾಡದ ಕೆಲ ಪ್ರದೇಶದ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ್ದರೆ, ಕೆಲವು ಮನೆಗಳು ಕುಸಿದುಬಿದ್ದಿವೆ. ನಗರದಲ್ಲಿ ಭಾರೀ ಸಂಖ್ಯೆಯ ಮರಗಳು ಉರುಳಿಬಿದ್ದಿವೆ. ಕೆಲವು ರಸ್ತೆಗಳಲ್ಲಿ ಮರಗಳು ಉರುಳಿಬಿದ್ದುದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ. ಈ ಎಲ್ಲಾ ಅನಾಹುತಗಳ ನಡುವೆ, ಧಾರಾಕಾರ ಮಳೆಯಿಂದಾಗಿ ನಗರದಲ್ಲಿ ಧಗೆ ಕಡಿಮೆಯಾಗಿದ್ದು , ತಾಪಮಾನ ಗಮನಾರ್ಹ ಪ್ರಮಾಣದಲ್ಲಿ ಕಡಿಮೆಯಾಗಿದೆ
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications