ಬೀದರ್ ಕರ್ನಾಟಕದಲ್ಲಿದೆಯೇ ಎಂದು ಕೃಷ್ಣರನ್ನೇ ಕೇಳಬೇಕು?
ಹುಮನಾಬಾದ್ : ಬೀದರ್ ಕರ್ನಾಟಕದಲ್ಲಿದೆಯೇ ಎಂಬ ಪ್ರಶ್ನೆಯನ್ನು ಮುಖ್ಯಮಂತ್ರಿ ಕೃಷ್ಣರನ್ನು ಕೇಳುವ ಕಾಲ ಬಂದಿದೆ. ಇದು ದುರ್ದೈವ ಎಂದು ಕೇಂದ್ರ ಪ್ರವಾಸೋದ್ಯಮ ಹಾಗೂ ಕನ್ನಡ ಸಂಸ್ಕೃತಿ ಸಚಿವ ಅನಂತಕುಮಾರ್ ಹೇಳಿದ್ದಾರೆ.
ಇಲ್ಲಿ ನಡೆದ ಬಿ.ಜೆ.ಪಿ. ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಕರ್ನಾಟಕದ ಭೂಪಟದಲ್ಲಿ ಕಳಶಪ್ರಾಯದಂತಿರುವ ಬೀದರ್ ಇನ್ನೂ ರಾಜ್ಯದಲ್ಲಿದೆಯೇ? ಎಂಬ ಅನುಮಾನ ಮೂಡಿದೆ. ಅಧಿಕಾರದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿಗಳಿಗೆ ಬೀದರ್ ಎಂಬ ಪ್ರದೇಶವೊಂದು ಇದೆ ಎಂಬುದು ನೆನಪಿದೆಯೋ ಇಲ್ಲವೋ ಗೊತ್ತಿಲ್ಲ. ಗೊತ್ತಿದ್ದರೆ ಅವರು ಒಮ್ಮೆಯಾದರೂ ಬೀದರ್ಗೆ ಭೇಟಿ ಕೊಟ್ಟಿಲ್ಲ ವೇಕೆ? ಇದಕ್ಕೆ ರಾಜ್ಯದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರೇ ಉತ್ತರ ನೀಡಬೇಕು ಎಂದು ವ್ಯಂಗ್ಯವಾಗಿ ನುಡಿದರು.
ಉತ್ತರ ಕರ್ನಾಟಕದ ಬಗ್ಗೆ ಮುಖ್ಯಮಂತ್ರಿಗಳಿಗಿರುವ ಧೋರಣೆಯನ್ನು ಇದು ತೋರಿಸುತ್ತದೆ. ಒಂದು ವರ್ಷ ಎಂಟು ತಿಂಗಳ ಅವಧಿಯಲ್ಲಿ ಬೀದರ್ಗೆ ಬರುವಷ್ಟು ಕಾಲಾವಕಾಶ ಕೃಷ್ಣರಿಗೆ ದೊರೆಯಲಿಲ್ಲವೇ? ಇದು ಕೃಷ್ಣರ ನಿರ್ಲಕ್ಷ್ಯ ಹಾಗೂ ಅಸಮಾನತೆಗೆ ಹಿಡಿದ ಕನ್ನಡಿ ಆಗಿದೆ ಎಂದೂ ಆರೋಪಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications