ಚುನಾವಣೆ, ಮತ ಎಣಿಕೆ ಆಗುವವರೆಗೆ ಸಂತೆ, ಜಾತ್ರೆ ನಿಷೇಧ
ಬೆಂಗಳೂರು : ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಮೇ ಮೊದಲ ವಾರದಲ್ಲಿ ನಡೆಯಲಿರುವ ಚುನಾವಣೆ ಹಾಗೂ ಮತ ಎಣಿಕೆಯ ಹಿನ್ನೆಲೆಯಲ್ಲಿ ಆ ಪ್ರದೇಶಗಳಲ್ಲಿ ಸಂತೆ ಅಥವಾ ಜಾತ್ರೆ ನಡೆಸದಂತೆ ರಾಜ್ಯ ಚುನಾವಣೆ ಆಯೋಗ ಸೂಚಿಸಿದೆ.
ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸುವ ನಿಟ್ಟಿನಲ್ಲಿ ಹಾಗೂ ಭದ್ರತೆಯ ಕಾರಣಗಳ ಮೇಲೆ ಆ ದಿನಗಳಂದು ನಡೆಯುವ ಸಂತೆ ಹಾಗೂ ಜಾತ್ರೆಗಳನ್ನು ಮುಂದೂಡುವಂತೆ ಆಯೋಗ ಆದೇಶಿಸಿದೆ.
ಸಂತೆಮಾಳ ಅಥವಾ ಜಾತ್ರೆ ಮೈದಾನ ಮತ ಎಣಿಕೆ ಕೇಂದ್ರದಿಂದ ದೂರದಲ್ಲಿದ್ದರೆ, ಅಂತಹ ಜಾತ್ರೆ ಹಾಗೂ ಸಂತೆಗೆ ಈ ನಿಷೇಧದಿಂದ ವಿನಾಯಿತಿ ನೀಡಲಾಗಿದೆ. ಈ ವಿಷಯವನ್ನು ಸೋಮವಾರ ಹೊರಡಿಸಿರುವ ಆಯೋಗದ ಪ್ರಕಟಣ ತಿಳಿಸಿದೆ.
ಚುನಾವಣೆ ಕಾವು : ಮೇ 3ರಂದು ನಡೆವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇನ್ನು ಉಳಿದಿರುವುದು ಮೂರೇ ದಿನ. ಎಲ್ಲೆಡೆ ಚುನಾವಣೆ ಕಾವು ಏರಿದೆ. ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ. ಎಲ್ಲೆಡೆ ವಿವಿಧ ರಾಜಕೀಯ ಪಕ್ಷಗಳ ಬ್ಯಾನರ್, ಕಟೌಟ್, ಬಾವುಟ, ಪೋಸ್ಟರ್‌ಗಳು ರಾರಾಜಿಸುತ್ತಿವೆ. ವಿವಿಧ ಪಕ್ಷಗಳ ಕಾರ್ಯಕರ್ತರ ನಡುವೆ ಸಣ್ಣ ಪುಟ್ಟ ಘರ್ಷಣೆಗಳೂ ನಡೆಯುತ್ತಿವೆ.
ಗೋಡೆಗಳು, ವೃತ್ತಗಳು ಪೋಸ್ಟರ್, ಬ್ಯಾನರ್‌ಗಳಿಂದ ತುಂಬಿ ಹೋಗಿವೆ. ಸ್ಥಳೀಯ ಟಿ.ವಿ. ಚಾನೆಲ್‌ಗಳಲ್ಲೂ ಚುನಾವಣೆ ಪ್ರಚಾರ ಭರದಿಂದ ನಡೆಯುತ್ತಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳು ರಾಜಕೀಯ ಪಕ್ಷಗಳ ನಿದ್ದೆಗೆಡಿಸಿವೆ. ಮೈಕಾಸುರನ ಹಾವಳಿ ಎಲ್ಲೆಡೆ ಕೇಳಿಬರುತ್ತಿದೆ. ಮೇ. 1ರಂದು ಕಾರ್ಮಿಕ ದಿನಾಚರಣೆ ನಿಮಿತ್ತ ಸರಕಾರಿ ರಜೆ ಇರುವ ಕಾರಣ ಚುನಾವಣೆ ಸಿಬ್ಬಂದಿ ನಿಯೋಜನೆ ಹಾಗೂ ಸಾಮಗ್ರಿಗಳನ್ನು ಸ್ಥಳಕ್ಕೆ ಪೂರೈಸುವ ಕಾರ್ಯ ಸೋಮವಾರವೇ ಆರಂಭವಾಗಿದೆ. ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
(ಇನ್‌ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications