ನೀರಾವರಿ ವಿವಾದದ ಬಗ್ಗೆ ಚರ್ಚೆಗೆ ಚುನಾವಣೆ ನಂತರ ಸರ್ವಪಕ್ಷ ಸಭೆ
ಬೆಂಗಳೂರು : ನೀರಾವರಿ ವಿವಾದದ ವಿಷಯಗಳ ಬಗ್ಗೆ ಚರ್ಚಿಸಲು ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಸೋಮವಾರ ಪ್ರಕಟಿಸಿದ್ದಾರೆ.
ಕರ್ನಾಟಕ ಹಾಗೂ ನೆರೆರಾಜ್ಯಗಳ ನೀರಾವರಿ ವಿವಾದಗಳ ಬಗ್ಗೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಸರ್ವಪಕ್ಷ ನಾಯಕರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
ಕೃಷ್ಣ ನದಿ ನೀರಿನ ವಿವಾದ, ಗೌರಿಬಿದನೂರಿನ ನೀರಾವರಿ ಯೋಜನೆ ಹಾಗೂ ಶಿರಾದಲ್ಲಿ ಹದಗೆಟ್ಟಿರುವ ನೀರಿನ ಪರಿಸ್ಥಿತಿಯ ಬಗ್ಗೆ ವಿವರಿಸಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಢು ಅವರಿಗೆ ಪತ್ರ ಬರೆಯಲಾಗಿದೆ. ನೀರಿನ ವಿಷಯದಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದ ಬಾಂಧವ್ಯ ಹಾಳುಮಾಡುವ ಪ್ರಯತ್ನಗಳು ನಡೆಯುತ್ತಿವೆ. ಈ ಬಗ್ಗೆ ಚಂದ್ರಬಾಬು ನಾಯ್ಢು ಅವರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆಯ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಅವರು ಹೇಳಿದರು.
ಶಿರಾ ತಾಲೂಕಿನ ಹೊನ್ನಗೊಂಡನಹಳ್ಳಿ ಕೆರೆ ಜಲಾನಯನ ಪ್ರದೇಶದಲ್ಲಿ ಸ್ವಾಭಾವಿಕವಾಗಿ ಹರಿಯುವ ನೀರನ್ನು ಆಂಧ್ರಪ್ರದೇಶ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ. ಇದರಿಂದ ಶಿರಾ ತಾಲೂಕಿನ ಸಾವಿರಾರು ಎಕರೆ ಪ್ರದೇಶ ನೀರಾವರಿ ವಂಚಿತವಾಗಲಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಹಾಗೂ ಇನ್ನಿತರ ನೀರಾವರಿ ವಿವಾದಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಲಸಂಪನ್ಮೂಲ ಸಚಿವರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಹೇಳಿದರು.
ಮುಖ್ಯಮಂತ್ರಿಗಳ ಸಭೆ : ವಿಶ್ವ ವ್ಯಾಪಾರ ಸಂಘಟನೆ ಡಬ್ಯೂಟಿಓ ಒಪ್ಪಂದದಿಂದಾಗಿ ಕೃಷಿಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿಗಳು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕರೆಯುತ್ತಿದ್ದಾರೆ. ಈ ಸಂಬಂಧ ರಾಜ್ಯ ಮಾಡಿಕೊಂಡಿದ್ದ ಮನವಿಗೆ ಪುರಸ್ಕಾರ ದೊರೆತಿದೆ ಎಂದೂ ಕೃಷ್ಣ ಹೇಳಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications