ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ಉಡುಪುಗಳ ರಫ್ತು ಪಾರ್ಕ್
ಬೆಂಗಳೂರು : ಉಡುಪುಗಳ ರಫ್ತು ಪಾರ್ಕೊಂದನ್ನು ರಾಜ್ಯದಲ್ಲಿ ಸ್ಥಾಪಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದ್ದು , ಈ ಸಂಬಂಧ ರಾಜ್ಯ ಸರ್ಕಾರದ ಅಧಿಕೃತ ಕೋರಿಕೆಗಾಗಿ ಕಾಯುತ್ತಿದೆ ಎಂದು ಕೇಂದ್ರ ಜವಳಿ ಖಾತೆ ರಾಜ್ಯ ಸಚಿವ ವಿ. ಧನಂಜಯ ಕುಮಾರ್ ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿ ಜರುಗಿದ ನೂತನ ಮಾದರಿಯ ಉಡುಪುಗಳ ಪ್ರದರ್ಶನ ಡಿಸೈನ್ ಕಲೆಕ್ಷನ್- 2001 ಕಾರ್ಯಕ್ರಮದಲ್ಲಿ ಧನಂಜಯ್ಕುಮಾರ್ ಮಾತನಾಡುತ್ತಿದ್ದರು. ಎನ್ಐಎಫ್ಟಿ (ರಾಷ್ಟ್ರೀಯ ವಸ್ತ್ರ ವಿನ್ಯಾಸ ಸಂಸ್ಥೆ ) ಯಲ್ಲಿ ಪದವಿ ಪೂರೈಸಿರುವ ವಿದ್ಯಾರ್ಥಿಗಳು ಈ ಉಡುಪುಗಳನ್ನು ರೂಪಿಸಿದ್ದಾರೆ.
ಮೂಲ ವಿನ್ಯಾಸಗಳ ಮೇಲಿನ ಗಮನವನ್ನು ನಾವೀಗ ನವೀನ ವಿನ್ಯಾಸಗಳ ಉಡುಪು ತಯಾರಿಕೆಯತ್ತ ತಿರುಗಿಸಬೇಕಾಗಿದೆ. 2000-01 ನೇ ಸಾಲಿನಲ್ಲಿ ರಾಷ್ಟ್ರದ ಉಡುಪು ರಫ್ತು ಉದ್ಯಮದ ವಹಿವಾಟು ಶೇ. 17 ರಷ್ಟು ಹೆಚ್ಚಿದ್ದು , ಈ ಪ್ರಮಾಣ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ ಎಂದು ಧನಂಜಯ ಕುಮಾರ್ ಹೇಳಿದರು.
48 ಗಂಟೆಗಳಲ್ಲಿ ಕೋರಿಕೆ ಸಲ್ಲಿಕೆ
ಡಿಸೈನ್ ಕಲೆಕ್ಷನ್- 2001 ರಲ್ಲಿ ಹಾಜರಿದ್ದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ , ಧನಂಜಯ ಕುಮಾರ್ ಅವರ ಮಾತುಗಳಿಗೆ ತಕ್ಷಣವೇ ಸ್ಪಂದಿಸಿದರು. ಉಡುಪು ರಫ್ತು ಪಾರ್ಕ್ನ ಸ್ಥಾಪನೆಗೆ ರಾಜ್ಯ ಸರ್ಕಾರ ಆಸಕ್ತಿ ಹೊಂದಿರುವುದನ್ನು ಸ್ಪಷ್ಟಪಡಿಸಿದ ಅವರು, ಇನ್ನು 48 ಗಂಟೆಗಳಲ್ಲಿ ಕೇಂದ್ರ ಸರ್ಕಾರಕ್ಕೆ ಉಡುಪುಗಳ ಪಾರ್ಕ್ ಸ್ಥಾಪನೆ ಸಂಬಂಧ ಅಧಿಕೃತ ಕೋರಿಕೆ ಸಲ್ಲಿಸಲಿದೆ ಎಂದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications