ವಿಶ್ವ ಹಿಂದೂ ಪರಿಷತ್ನ ಅಶೋಕ್ ಸಿಂಘಾಲ್ಗೆ ಹೃದಯಾಘಾತ
ಕೊಯಮತ್ತೂರು : ವಿಶ್ವ ಹಿಂದೂ ಪರಿಷತ್ನ ಮುಖ್ಯಸ್ಥ ಅಶೋಕ್ ಸಿಂಘಾಲ್ ಮಂಗಳವಾರ ತೀವ್ರ ಹೃದಯಾಘಾತಕ್ಕೆ ತುತ್ತಾಗಿದ್ದು , ಅವರನ್ನು ಇಲ್ಲಿನ ಕೆಜಿ ಆಸ್ಪತ್ರೆಗೆ ಸೇರಿಸಲಾಗಿದೆ.
ಸಿಂಘಾಲ್ ಅವರ ದೇಹಸ್ಥಿತಿ ಈಗ ಸ್ಥಿರವಾಗಿದ್ದು , ತೀವ್ರ ನಿಗಾ ವಿಭಾಗದಲ್ಲಿ ನುರಿತ ಹೃದಯ ತಜ್ಞರು ಅವರನ್ನು ಉಪಚರಿಸುತ್ತಿದ್ದಾರೆ. ಮುಂದಿನ 48 ಗಂಟೆಗಳವರೆಗೆ ಅವರನ್ನು ಅಬ್ಸರ್ವೇಶನ್ನಲ್ಲಿ ಇಡಲಾಗುವುದು ಎಂದು ಆಸ್ಪತ್ರೆಯ ಅಧ್ಯಕ್ಷ ಡಾ. ಜಿ. ಭಕ್ತವತ್ಸಲಂ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸಿಂಘಾಲ್ ಹೃದಯಾಘಾತಕ್ಕೆ ತುತ್ತಾಗುತ್ತಿರುವುದು ಇದೇ ಮೊದಲೇನಲ್ಲ . 1992 ರಲ್ಲಿ ಹಾಲೆಂಡ್ ಭೇಟಿಗೆ ತೆರಳಿದ್ದ ಸಂದರ್ಭದಲ್ಲಿ ಕೂಡ ಅವರು ಹೃದಯಾಘಾತಕ್ಕೆ ತುತ್ತಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಸೋಮವಾರವಷ್ಟೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಂಘಾಲ್ ಮಾರ್ಚ್ 16, 2002 ಅವಧಿಯಾಳಗೆ ರಾಮ ಮಂದಿರವನ್ನು ನಿರ್ಮಿಸುವ ತನ್ನ ನಿಲುವಿಗೆ ವಿಶ್ವ ಹಿಂದೂ ಪರಿಷತ್ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ್ದರು. ಒಮ್ಮೆ ಮಂದಿರದ ಕೆಲಸ ಪ್ರಾರಂಭವಾದರೆ, ಆನಂತರ ಪ್ರತಿಭಟನೆ ಎದುರಾಗಬಹುದೆಂದು ತಾವು ಭಾವಿಸುವುದಿಲ್ಲ ಎಂದು ಹೇಳಿದ್ದ ಅವರು, ಬರುವ ವರ್ಷದ ಫೆಬ್ರವರಿ 17ರಂದು ಅಯೋಧ್ಯೆಯಿಂದ ದೆಹಲಿಗೆ ತೆರಳುವ 5 ಸಾವಿರ ಸಾಧುಗಳ ರ್ಯಾಲಿ ಮಂದಿರ ನಿರ್ಮಾಣ ಕುರಿತು ಘೋಷಣೆ ಹೊರಡಿಸುವರು ಎಂದು ಹೇಳಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications