ಮಳೆಗಾಗಿ ಮುಗಿಲು ನೋಡುತ್ತಿವೆ ಕಣ್ಣುಗಳು
ಬೆಂಗಳೂರು : ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಬಿಸಿಲು ಏರಿದೆ. ರಾಯಚೂರಿನಲ್ಲಿ ಅತಿಹೆಚ್ಚು ತಾಪಮಾನ 43.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಬೆಂಗಳೂರಿನಲ್ಲಿ ಕೂಡ ಹಗಲಿನ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿತ್ತು.
ಈ ಮಧ್ಯೆ ಒಳನಾಡಿನ ಅಲ್ಲಲ್ಲಿ ಸಣ್ಣ ಮಳೆ ಬಿದ್ದಿದೆ. ಗರಿಷ್ಠ ತಾಪಮಾನವೂ ಏರಿದೆ. ಕರಾವಳಿಯಲ್ಲಿ ಹೆಚ್ಚಾಗಿ ಒಣಹವೆಯೇ ಮುಂದುವರಿದಿತ್ತು. ಉತ್ತರ ಒಳನಾಡಿನ ಅನೇಕ ಕಡೆಗಳಲ್ಲೂ ಉಷ್ಣಾಂಶ ಸಾಮಾನ್ಯಕ್ಕಿಂತಲೂ ಅಧಿಕವಾಗಿತ್ತು. ದಕ್ಷಿಣ ಒಳನಾಡಿನ ಕೆಲವೆಡೆ ಸಾಮಾನ್ಯ ಮಟ್ಟದಲ್ಲಿತ್ತು.
ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಒಳನಾಡಿನ ಅಲ್ಲಲ್ಲಿ ಚದುರಿದಂತೆ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಆಗಲಿದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನಿರ್ಮಲ ಆಕಾಶ ಇದ್ದು, ಗರಿಷ್ಠ ಉಷ್ಣಾಂಶ 34 ಡಿಗ್ರಿ ತಲುಪಲಿದೆ.
ಏರುತ್ತಿರುವ ಬಿರುಬಿಸಿಲಿನಿಂದ ಬೆವರು ಹರಿಯುತ್ತಿದೆ. ಬಿಸಿಲ ಝಳಕ್ಕೆ ಆಯಾಸ ಹೆಚ್ಚುತ್ತಿದೆ. ಮಧ್ಯಾಹ್ನದ ನಂತರವಂತೂ ಹೇಳಿಕೊಳ್ಳಲಾರದ ತಳಮಳ. ಎಷ್ಟು ನೀರು ಕುಡಿದರೂ ಇಂಗದ ದಾಹ. ರಾತ್ರಿಯಂತೂ ಗಿರಿಗಿರಿ ತಿರುಗುವ ಫ್ಯಾನ್ನಿಂದ ಮತ್ತಷ್ಟು ಬಿಸಿಗಾಳಿಯೇ ಹೊರಹೊಮ್ಮುತ್ತಿದೆ. ಮಳೆಯಾದರೆ ಸಾಕೆಂಬ ಜನರ ಕಣ್ಣುಗಳು ಮುಗಿಲು ನೋಡುತ್ತಿವೆ. ಇಳೆಯೂ ಮಳೆಯನ್ನೇ ನಿರೀಕ್ಷಿಸುತ್ತಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications