Get Updates
Get notified of breaking news, exclusive insights, and must-see stories!

148 ನಗರಸಭೆ, ಪಾಲಿಕೆಗಳಿಗೆ ಗುರುವಾರ ನಿರ್ಣಾಯಕ ಮತದಾನ

ಬೆಂಗಳೂರು : ನಾಲ್ಕು ಮಹಾನಗರ ಪಾಲಿಕೆ ಸೇರಿದಂತೆ ಒಟ್ಟು 148 ಪೌರ ಸಂಸ್ಥೆಗಳಿಗೆ ಗುರುವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿರ್ಣಾಯಕ ಮತದಾನ ನಡೆಯಲಿದೆ. ರಾಜ್ಯ ಚುನಾವಣೆ ಆಯೋಗ ಸಕಲ ಸಿದ್ಧತೆಗಳನ್ನೂ ಮಾಡಿದೆ.

ನಗರ ಪಾಲಿಕೆ ಹಾಗೂ ಪೌರ ಸಂಸ್ಥೆಗಳ ಒಟ್ಟು 3722 ವಾರ್ಡ್‌ಗಳಲ್ಲಿ ನಡೆಯಲಿರುವ ಮತದಾನದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ರಾಜ್ಯದಲ್ಲಿ 2800 ಮತಗಟ್ಟೆಗಳನ್ನು ಸೂಕ್ಷ ಮತಗಟ್ಟೆಗಳೆಂದೂ, 2000 ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳೆಂದೂ ಗುರುತಿಸಲಾಗಿದೆ.

ಬಹಿರಂಗ ಪ್ರಚಾರ ಬುಧವಾರ ಬೆಳಗ್ಗೆ ಕೊನೆಗೊಂಡಿದೆ. ಈಗಾಗಲೇ 142 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದರೆ, 13,731 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಪೌರ ಸಂಸ್ಥೆಗಳ ಆಡಳಿತದ ಚುಕ್ಕಾಣಿ ಹಿಡಿಯಲು ಆಡಳಿತಾರೂಢ ಕಾಂಗ್ರೆಸ್‌, ಪ್ರತಿಪಕ್ಷಗಳಾದ ಜನತಾದಳ ಸಂಯುಕ್ತ, ಜನತಾದಳ ಜಾತ್ಯತೀತ ಹಾಗೂ ಭಾರತೀಯ ಜನತಾಪಕ್ಷಗಳು ತೀವ್ರ ಹೋರಾಟ ನಡೆಸುತ್ತಿವೆ. ಸಾಕಷ್ಟು ಸಂಖ್ಯೆಯಲ್ಲಿ ಪಕ್ಷೇತರ ಅಭ್ಯರ್ಥಿಗಳೂ ಕಣದಲ್ಲಿದ್ದಾರೆ.

ರಾಜ್ಯದ್ಯಂತ 7927 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಚುನಾವಣೆ ಕಾರ್ಯಕ್ಕೆ 24,800 ಮಂದಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸುಗಮವಾಗಿ ಮತದಾನ ನಡೆಯುವಂತೆ ನೋಡಿಕೊಳ್ಳಲು ಸ್ಥಳೀಯ ಪೊಲೀಸರಿಗೆ ರಾಜ್ಯಾದ್ಯಂತ ಒಟ್ಟು 80 ತುಕಡಿ ಕೆ.ಎಸ್‌.ಆರ್‌.ಪಿ. ಹಾಗೂ 6,150 ಗೃಹರಕ್ಷಕ ದಳದ ಸಿಬ್ಬಂದಿ ನೆರವಾಗಲಿದ್ದಾರೆ.

ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+