ಗುರುವಾರ ಬೆಂಗಳೂರಲ್ಲಿ ಚಂದ್ರಬಾಬು ನಾಯ್ಡು ಪ್ರತಿಕೃತಿ ದಹನ
ಬೆಂಗಳೂರು : ಕರ್ನಾಟಕದ ನೀರಿಗೆ ಅಕ್ರಮವಾಗಿ ಕನ್ನ ಹಾಕುತ್ತಿರುವ ಆಂಧ್ರಪ್ರದೇಶದ ಧೋರಣೆಯನ್ನು ಖಂಡಿಸಿ, ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಗುರುವಾರ ಬೆಂಗಳೂರಿನಲ್ಲಿ ಚಂದ್ರಬಾಬು ನಾಯ್ಡು ಅವರ ಭೂತದಹನ ಕಾರ್ಯಕ್ರಮ ಹಮ್ಮಿಕೊಂಡಿದೆ.
ಗುರುವಾರ ಬೆಳಗ್ಗೆ 11ಗಂಟೆಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಕನ್ನಡ ಚಳವಳಿ ಕೇಂದ್ರ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ. ನಾರಾಯಣ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿರಾ ತಾಲೂಕಿನ ಹೊನ್ನಗೊಂಡನಹಳ್ಳಿ ಬಳಿಯ ಸಿಡಗಪ್ಪಕಟ್ಟೆಯಿಂದ ಮಡಕಶಿರಾ ತಾಲೂಕಿನ ಟಿ. ಬ್ಯಾಡರಹಳ್ಳಿ ಕೆರೆಗೆ ನೀರು ಹರಿಸಲು ಆಂಧ್ರ ಪ್ರದೇಶ ಸರಕಾರ ಕಾನೂನು ಬಾಹಿರವಾಗಿ ಫೀಡರ್ ಕಾಲುವೆ ನಿರ್ಮಿಸುತ್ತಿರುವುದನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ.
ಇದು ಚಂದ್ರಬಾಬು ನಾಯ್ಡು ಅವರ ದುರಹಂಕಾರದ ವರ್ತನೆಯಾಗಿದೆ. ಇಂತಹ ದುಸ್ಸಾಹಸಗಳಿಂದ ಎರಡೂ ರಾಜ್ಯಗಳ ಬಾಂಧವ್ಯ ಸಂಪೂರ್ಣ ಹದಗೆಡುತ್ತದೆ. ಕೂಡಲೇ ಕಾಮಗಾರಿಗಳನ್ನು ನಿಲ್ಲಿಸುವ ಮೂಲಕ ರಾಷ್ಟ್ರದ ಏಕತೆ ಕಾಪಾಡುವಂತೆ ಅವರು ಚಂದ್ರಬಾಬು ನಾಯ್ಡು ಅವರನ್ನು ಒತ್ತಾಯಿಸಿದ್ದಾರೆ.
ಆಂಧ್ರಪ್ರದೇಶ ಸರಕಾರ ಫೀಡರ್ ಕಾಲುವೆ ಕಾಮಗಾರಿ ನಿಲ್ಲಿಸದಿದ್ದಲ್ಲಿ, ಚಳವಳಿ ಕೇಂದ್ರ ಸಮಿತಿಯ ಕಾರ್ಯಕರ್ತರು ಹಾಗೂ ಕನ್ನಡ ಚಳವಳಿಗಾರರು ಕಾಮಗಾರಿ ಸ್ಥಳಕ್ಕೇ ಹೋಗಿ ಹೋರಾಟ ನಡೆಸಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications