ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಮೇ 10 ರಂದು ಸಂಭವ
ಬೆಂಗಳೂರು : ಮಾರ್ಚ್ 21ರಿಂದ 28ರವರೆಗೆ ರಾಜ್ಯಾದ್ಯಂತ 1825 ಕೇಂದ್ರಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಗಳ ಫಲಿತಾಂಶ ಪ್ರಕಟಣೆ ಕನಿಷ್ಠ 5 ದಿನಗಳಾದರೂ ವಿಳಂಬವಾಗುತ್ತದೆ ಎಂದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿಯ ಉನ್ನತಾಧಿಕಾರಿಗಳ ಮೂಲಗಳು ತಿಳಿಸಿವೆ.
ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಿಗದಿತ ವೇಳಪಟ್ಟಿಯಂತೆ ನಡೆಯುವಲ್ಲಿ ಆದ ಅಡಚಣೆಯಿಂದಾಗಿ ಈ ಮೊದಲೇ ಪ್ರಕಟಿಸಿದ್ದಂತೆ ಮೇ 5ರ ಬದಲಾಗಿ ಮೇ 10ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದ್ದು ಅಂಕಪಟ್ಟಿಗಳನ್ನು ಮೇ ತಿಂಗಳ ಅಂತ್ಯ ಅಥವಾ ಜೂನ್ ಮೊದಲ ವಾರದೊಳಗೆ ನೀಡಲಾಗುವುದು ಎಂದು ಮಂಡಳಿಯ ಉನ್ನತಾಧಿಕಾರಿ ಇಂಡಿಯಾ ಇನ್‌ಫೋ ಡಾಟ್ ಕಾಂಗೆ ತಿಳಿಸಿದ್ದಾರೆ.
ಈಗ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ಮುಗಿದಿದ್ದು, ಫಲಿತಾಂಶವನ್ನು ಕಂಪ್ಯೂಟರ್‌ಗೆ ದಾಖಲಿಸುವ ಕಾರ್ಯ ನಡೆಯುತ್ತಿದೆ. ಫಲಿತಾಂಶದಲ್ಲಿ ಯಾವುದೇ ರೀತಿಯ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರ ವಹಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
11 ಸಾವಿರದ 600 ಮಂದಿ ಖಾಸಗಿ ವಿದ್ಯಾರ್ಥಿಗಳು, 5 ಲಕ್ಷದ 23 ಸಾವಿರ ಮೊದಲ ಬಾರಿಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಹಾಗೂ 2 ಲಕ್ಷ ಪುನರಾವರ್ತನೆಯ ವಿದ್ಯಾರ್ಥಿಗಳು ಸೇರಿದಂತೆ 7 ಲಕ್ಷದ 40 ಸಾವಿರ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗಿದ್ದರು.
ಪ್ರಶ್ನೆ ಪತ್ರಿಕೆಗಳು ಬಹಿರಂಗವಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಪರೀಕ್ಷೆಗೆ ಮುನ್ನ ತಿಳಿಸಲಾಗಿತ್ತಾದರೂ, ಪ್ರಶ್ನೆ ಪತ್ರಿಕೆ ಬಯಲಾಗಿತ್ತು ಎಂಬ ಆರೋಪ ಇದೆ. ಈ ಬಗ್ಗೆ ವಿಧಾನಸಭೆಯಲ್ಲೂ ಚರ್ಚೆ ಆಗಿತ್ತು. ಸರಕಾರ ಈ ಆರೋಪ ನಿರಾಕರಿಸಿತ್ತು. ಗಣಿತ ವಿಷಯದ ಪ್ರಶ್ನೆ ಪತ್ರಿಕೆಯನ್ನು ಬದಲಾಯಿಸಲಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications