ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಇಟಿ ಪರೀಕ್ಷಾರ್ಥಿಗಳ ಸಂಖ್ಯೆಯಲ್ಲಿ ಪ್ರತಿಶತ 27 ಹೆಚ್ಚಳ

By Staff
|
Google Oneindia Kannada News

ಬೆಂಗಳೂರು : 1 ಲಕ್ಷಕ್ಕೂ ಹೆಚ್ಚು ಮಂದಿ ಈ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲಿದ್ದು , ಈ ಸಂಖ್ಯೆ ಕಳೆದ ವರ್ಷಕ್ಕಿಂತ ಪ್ರತಿಶತ 27 ರಷ್ಟು ಹೆಚ್ಚಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ಕಳೆದ ವರ್ಷ 1 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯನ್ನು ತೆಗೆದುಕೊಂಡಿದ್ದರು. ಈ ಬಾರಿ ಆ ಸಂಖ್ಯೆ 1.27 ಲಕ್ಷ ಮುಟ್ಟಿದ್ದು , ಅವರಲ್ಲಿ 66 ಸಾವಿರ ಮಂದಿ ವಿದ್ಯಾರ್ಥಿಗಳು ಬೆಂಗಳೂರಿನಿಂದಲೇ ಪರೀಕ್ಷೆ ಬರೆಯಲಿದ್ದಾರೆ. ಬೆಂಗಳೂರಿನಲ್ಲಿ ಪರೀಕ್ಷಾ ಕೇಂದ್ರಗಳನ್ನಾಗಿ 142 ಶಿಕ್ಷಣ ಸಂಸ್ಥೆಗಳನ್ನು ಗುರ್ತಿಸಲಾಗಿದೆ ಎಂದು ಸಿಇಟಿ ಪರೀಕ್ಷೆಯ ವಿಶೇಷಾಧಿಕಾರಿ ಎಸ್‌. ಜಮಾಲ್‌ ತಿಳಿಸಿದ್ದಾರೆ.

ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಇಂಜಿನಿಯರಿಂಗ್‌ ಶಿಕ್ಷಣಕ್ಕೆ ಪ್ರವೇಶ ಕಲ್ಪಿಸುವ ಈ ಸಿಇಟಿ ಪರೀಕ್ಷೆಗಳು ಮೇ 16 ಹಾಗೂ 17 ರಂದು ನಡೆಯಲಿವೆ.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X