ಕೆಎಎಸ್ ಅಧಿಕಾರಿ ಮನೆ ಮೇಲೆ ದಾಳಿ : ಕೋಟಿ ರು.ಆಸ್ತಿ ಪತ್ತೆ
ಬೆಂಗಳೂರು : ಹಿರಿಯ ಕೆ.ಎ.ಎಸ್. ಅಧಿಕಾರಿ ಎ.ಎನ್. ಗೋವಿಂದರಾಜ್ ಅವರ ಕಚೇರಿ ಮತ್ತು ತುಮಕೂರಿನ ಅವರ ಮನೆಯ ಮೇಲೆ ಏಕಕಾಲಕ್ಕೆ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ಒಂದು ಕೋಟಿ ರುಪಾಯಿಗೂ ಹೆಚ್ಚು ಅಕ್ರಮ ಆಸ್ತಿ ಪಾಸ್ತಿಯನ್ನು ಪತ್ತೆ ಹಚ್ಚಿದ್ದಾರೆ.
ಲೋಕಾಯುಕ್ತ ದಾಳಿಯ ಸಂದರ್ಭದಲ್ಲಿ 40 ಲಕ್ಷ ರುಪಾಯಿ ಮೌಲ್ಯದ ಭವ್ಯ ಬಂಗಲೆಯ ದಾಖಲೆ ಪತ್ರ, ಮನೆಯಿಂದ 2.5 ಲಕ್ಷ ರುಪಾಯಿ ನಗದು, 2.5 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ, 3 ಲಕ್ಷ ರುಪಾಯಿಗೂ ಹೆಚ್ಚು ವಿದ್ಯುನ್ಮಾನ ಉಪಕರಣಗಳು, 10 ಲಕ್ಷ ರುಪಾಯಿ ಮೌಲ್ಯದ ಉಳಿತಾಯ ಪತ್ರ, ಕಾರ್ಖಾನೆಯ ದಾಖಲೆ, 30 ಎಕರೆ ಜಮೀನು, ತೋಟದ ಮನೆಯೇ ಮೊದಲಾದ ಆದಾಯಕ್ಕೂ ಮೀರಿದ ಆಸ್ತಿಯನ್ನು ಪತ್ತೆ ಮಾಡಲಾಗಿದೆ.
ಈ ಎಲ್ಲ ದಾಖಲೆಗಳನ್ನು ಜಫ್ತಿ ಮಾಡಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್.ಪಿ. ನಾಗರಾಜ್ ಎಂ.ಎನ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಡಿವೈಎಸ್ಪಿ ಕೆ. ತಳಕೇರಿ, ಇನ್ಸ್ಪೆಕ್ಟರ್ ಎ.ಎಸ್.ಎನ್. ಅರಟ್ಟಿ ಮುಂತಾದವರು ತಂಡದಲ್ಲಿದ್ದರು.
ಈ ಹಿರಿಯ ಕೆ.ಎ.ಎಸ್. ಅಧಿಕಾರಿ ಈ ಮುನ್ನ ಚಿತ್ರದುರ್ಗ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇವರು ತುಮಕೂರಿನಲ್ಲಿ ಷಾಪಿಂಗ್ ಕಾಂಪ್ಲೆಕ್ಸ್ ಕೂಡ ಹೊಂದಿದ್ದಾರೆ. ದಾಳಿಯ ಸಂದರ್ಭದಲ್ಲಿ 2 ಲಕ್ಷ ರುಪಾಯಿ ಬ್ಯಾಂಕ್ ಠೇವಣಿ ದಾಖಲೆಗಳನ್ನೂ ವಶಪಡಿಸಿಕೊಳ್ಳಲಾಗಿದೆ.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications