ಅಂತರಂಗ ಬಹಿರಂಗಕ್ಕೆ ಬೇಕು ಕಡಿವಾಣ - ಡಿ. ವೀರೇಂದ್ರ ಹೆಗ್ಗಡೆ
ಉಜಿರೆ : ಸತ್ಯ, ಸದಾಚಾರಗಳ ದಾರಿಯಲ್ಲಿ ಸ್ಪಷ್ಟವಾದ ಗುರಿಯನ್ನಿಟ್ಟುಕೊಂಡು ಸಾಗುವ ಮನುಷ್ಯನಿಗೆ ದೈವ ಸಹಾಯ ತಾನೇ ತಾನಾಗಿ ಒದಗಿ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಇತ್ತೀಚೆಗೆ ನಡೆದ, ಬೆಳ್ತಂಗಡಿ ತಾಲ್ಲೂಕಿನ ರೆಖ್ಯಾ ಗ್ರಾಮದ ಅರಣ್ಯದಲ್ಲಿ ನೂರಾರು ವರ್ಷಗಳಿಂದ ಅಜ್ಞಾತವಾಗಿದ್ದ ಶ್ರೀ ಗುಡ್ರಾ ಮಲ್ಲೇಶ್ವರ ದೇವಸ್ಥಾನದ ನೂತನ ನಿರ್ಮಾಣ, ಪ್ರತಿಷ್ಠಾಬಂಧ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಎಲ್ಲ ಧರ್ಮಗಳು ಮನುಷ್ಯನ ಅಂತರಂಗ ಹಾಗೂ ಬಹಿರಂಗಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ಮಾಡುತ್ತಿವೆ ಎಂದು ಹೆಗ್ಗಡೆ ಅಭಿಪ್ರಾಯಪಟ್ಟರು.
ದೇವಸ್ಥಾನಗಳನ್ನು ಕಟ್ಟಿದರೆ ಸಾಲದು, ನಿತ್ಯವೂ ಅಲ್ಲಿಗೆ ಹೋಗಿ ಪ್ರೇರಣೆಯನ್ನು ಪಡೆಯುವಂತಾದರೆ ಮಾತ್ರ ದೇಗುಲದ ನಿರ್ಮಾಣ ಸಾರ್ಥಕವೆನಿಸುತ್ತದೆ ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾಹಿತಿ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಹೇಳಿದರು. ಜನಪ್ರಿಯ ಜ್ಯೋತಿಷಿ ಶಿಶಿಲದ ಕ.ಪು. ಸೀತಾರಾಮ ಕೆದಿಲಾಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications