ಬೀಡಿ ಉದ್ಯಮಕ್ಕೆ ಬೆಂಕಿ ತಗುಲಿಸಿದಸರ್ಕಾರದ ತೆರಿಗೆ ನೀತಿ
ಮಂಗಳೂರು : ರಾಜ್ಯದಲ್ಲಿ ಬೀಡಿಯ ಮೇಲೆ ಶೇ 2ರಷ್ಟು ಪ್ರವೇಶ ತೆರಿಗೆ ವಿಧಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಇದರಿಂದಾಗಿ ಈಗಾಗಲೇ ಸಂಕಷ್ಟದಲ್ಲಿರುವ ಬೀಡಿ ಉದ್ಯಮ ಅವಸಾನದತ್ತ ತಳ್ಳಲ್ಪಟ್ಟಿದೆ.
ಸರಕಾರ ಬೀಡಿ ಉದ್ಯಮದ ಮೇಲೆ ತೆರಿಗೆ ವಿಧಿಸುವ ನಿರ್ಧಾರವನ್ನು ಹಿಂತೆಗೆದುಕೊಳ್ಳದೇ ಇದ್ದರೆ, ಬೀಡಿ ಉದ್ಯಮಗಳನ್ನೆಲ್ಲ ಮುಚ್ಚಬೇಕಾಗುತ್ತದೆ. ಅಥವಾ ಹೊರರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಕರ್ನಾಟಕ ಬೀಡಿ ಕೈಗಾರಿಕೆಗಳ ಸಂಘದ ಗಣಪತಿ ಪೈ ಅಭಿಪ್ರಾಯಪಟ್ಟಿದ್ದಾರೆ.
ಪ್ರವೇಶ ತೆರಿಗೆಯನ್ನು ಹಿಂತೆಗೆದುಕೊಳ್ಳುವಂತೆ ಸರಕಾರಕ್ಕೆ ಈಗಾಗಲೇ ಮನವಿ ಮಾಡಿಕೊಳ್ಳಲಾಗಿದೆ. ಪ್ರವೇಶ ತೆರಿಗೆಯಿಂದ ಬೀಡಿಯ ಮಾರಾಟ ದರವನ್ನು ಹೆಚ್ಚಿಸಬೇಕಾಗುತ್ತದೆ. ಆದರೆ ಹೊರ ರಾಜ್ಯಗಳಲ್ಲಿ, ರಾಜ್ಯಸರಕಾರದ ತೆರಿಗೆ ಇಲ್ಲದೇ ಇರುವುದರಿಂದ ಅಲ್ಲಿ ಕಡಿಮೆ ವೆಚ್ಚದಲ್ಲಿ ಬೀಡಿ ತಯಾರಾಗಿ, ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ. ಹೆಚ್ಚು ಬೆಲೆ ಕೊಟ್ಟು ಕರ್ನಾಟಕದ ಬೀಡಿಯನ್ನು ಯಾರೂ ಕೊಳ್ಳುವುದಿಲ್ಲ ಎಂದು ಪೈ ಹೇಳಿದರು.
ಸರಕಾರ ತನ್ನ ಪ್ರವೇಶ ತೆರಿಗೆ ಹಿಂದೆ ಪಡೆಯದೇ ಇದ್ದರೆ 6 ಲಕ್ಷ ಮಂದಿ ಬೀಡಿ ಕಾರ್ಮಿಕರು ನಿರುದ್ಯೋಗಿಗಳಾಗುತ್ತಾರೆ. ಈ ಅಪಾಯದ ಬಗ್ಗೆ ರಾಜ್ಯ ಸರಕಾರಕ್ಕೆ ಮನವಿ ಮಾಡಿಕೊಡಲು ತೆರಿಗೆ ಸುಧಾರಣಾ ಆಯೋಗದ ಅಧ್ಯಕ್ಷ ವೀರಪ್ಪ ಮೊಯಿಲಿ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಗಣಪತಿ ಪೈ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications