ತಣ್ಣೀರುಬಾವಿ ಬಾರ್ಜ್ ಮೌಂಟೆಡ್ ಸ್ಥಾವರದಲ್ಲಿ ತೈಲ ಸೋರಿಕೆ
ಮಂಗಳೂರು : ಮಂಗಳೂರು ಸಮೀಪ ತಣ್ಣೀರು ಬಾವಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ರಾಜ್ಯದ ಮೊತ್ತ ಮೊದಲ ಬಾರ್ಜ್ ಮೌಂಟೆಡ್ ವಿದ್ಯುತ್ ಸ್ಥಾವರದಲ್ಲಿ ಗುರುವಾರ ಪೈಪ್ ಒಡೆದು ಸಾವಿರಾರು ಲೀಟರ್ ತೈಲ ನದಿ ಸೇರಿದ್ದು , ತೀವ್ರ ಜಲಮಾಲಿನ್ಯವುಂಟಾಗಿದೆ.
ಕರಾವಳಿ ನಿಯಂತ್ರಣ ಕಾಯ್ದೆಯನ್ನು ಪೂರ್ಣವಾಗಿ ಉಲ್ಲಂಘಿಸಿ, ಸ್ಥಳೀಯರ ಪ್ರತಿಭಟನೆಯನ್ನು ಗಮನಿಸಿ, ತಣ್ಣೀರು ಬಾವಿಯ ಸುಂದರ ಬೀಚನ್ನು ನಿರ್ನಾಮ ಮಾಡಿ ಅಸ್ತಿತ್ವಕ್ಕೆ ಬಂದಿರುವ ಬಾರ್ಜ್ ಮೌಂಟೆಡ್ ಉತ್ಪಾದನೆ ಆರಂಭಕ್ಕೆ ಮೊದಲೇ ಜಲ ಮಾಲಿನ್ಯ ಉಂಟುಮಾಡಿರುವುದು ಮೀನುಗಾರರ ಕಂಗೆಡಿಸಿದೆ.
ತಣ್ಣೀರು ಬಾವಿ ಪ್ರದೇಶದಲ್ಲಿ ಗುರುವಾರ ಗುರುಪುರ ನದಿಯಲ್ಲಿ ತೈಲ ತೇಲುತ್ತಿರುವುದು ಪತ್ತೆಯಾಗಿತ್ತು. ನ್ಯಾಫ್ತಾದಿಂದ ವಿದ್ಯುತ್ ಉತ್ಪಾದಿಸಲಾಗುವುದು ಎಂದು ಯೋಜನಾ ವರದಿಯಲ್ಲಿ ತಿಳಿಸಿರುವ ಬಾರ್ಜ್ ಮೌಂಟೆಡ್ ವಿದ್ಯುತ್ ಸ್ಥಾವರ , ಆರಂಭದ ಕೆಲ ಕಾಲ ಡೀಸೆಲ್ ಬಳಸಿ ವಿದ್ಯುತ್ ಉತ್ಪಾದನೆ ಮಾಡಲು ಯೋಚಿಸುತ್ತಿದೆ. ಇದರಿಂದಾಗಿ ಎಚ್. ಪಿ. ಸಿ. ಎಲ್. ಟ್ಯಾಂಕರ್ನಿಂದ ಬಾರ್ಜ್ಗೆ ತೈಲ ಸಾಗಿಸುವಾಗ ಪೈಪ್ ಒಡೆದು ಸೋರಿಕೆ ಉಂಟಾಗಿದೆ. ಈ ಬಗ್ಗೆ ಕಂಪೆನಿಯಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
(ಮಂಗಳೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications