ಬಿಸಿಲೇರುತ್ತಿದ್ದ ಬೆಂಗಳೂರಿಗೆ ತಂಪೆರೆದ ಮಳೆ
ಬೆಂಗಳೂರು : ಬೆಂಗಳೂರಿನಲ್ಲಿ ಈ ಹೊತ್ತು ಮೋಡ ಮುಸುಕಿದೆ. ಮಳೆಯಾಗುವ ಎಲ್ಲ ಲಕ್ಷಣಗಳೂ ಕಂಡು ಬಂದಿವೆ. ಸಂಜೆ ಐದು ಗಂಟೆ ಹೊತ್ತಿಗೆ ಗಾಳಿಯ ಜತೆ ಕೆಲವು ಬಡಾವಣೆಗಳಲ್ಲಿ ಭಾರಿ ಮಳೆಯೇ ಆಯಿತು. ಗುರುವಾರ ಸಂಜೆ ಹಾಗೂ ಶುಕ್ರವಾರ ಸಂಜೆ ಬಿದ್ದ ಮಳೆ ನಗರದ ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿತ್ತು.
ತಗ್ಗು ಪ್ರದೇಶದ ಕೆಲವು ಮನೆಗಳಿಗೆ ನೀರು ನುಗ್ಗಿ ಭಾರಿ ಹಾವಳಿ ಮಾಡಿತು. ರಾತ್ರಿ ಸಹ ಜೋರು ಮಳೆಯಾಗುವ ಸಾಧ್ಯತೆಗಳಿವೆ. ಈ ಮಧ್ಯೆ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಅಲ್ಲಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆ ಬಿದ್ದಿದೆ.
ರಾಯಚೂರಿನಲ್ಲಿ 4 ಸೆಂಟಿ ಮೀಟರ್, ತಿಪ್ಪಗೊಂಡನಹಳ್ಳಿ ಹಾಗೂ ಬೆಂಗಳೂರಲ್ಲಿ 3 ಸೆಂಟಿ ಮೀಟರ್ ಹಾಗೂ ಭಾಗಮಂಡಲ, ಕೆ.ಜಿ.ಎಫ್, ಚಿಕ್ಕಮಗಳೂರುಗಳಲ್ಲಿ ತಲಾ 1 ಸೆಂಟಿ ಮೀಟರ್ ಮಳೆ ಬಿದ್ದಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಗರಿಷ್ಠ ಉಷ್ಣಾಂಶ ಇಳಿಮುಖವಾಗಿತ್ತು. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಮಾನ್ಯ ಮಟ್ಟಕ್ಕಿಂತ ತುಸು ಅಧಿಕವಾಗಿತ್ತು.
ರಾಜ್ಯದ ಅತಿ ಹೆಚ್ಚಿನ ತಾಪಮಾನ 43.6 ಡಿಗ್ರಿ ಸೆಲ್ಸಿಯಸ್ ಗುಲ್ಬರ್ಗಾದಲ್ಲಿ ದಾಖಲಾಗಿತ್ತು. ಮುನ್ಸೂಚನೆಯ ಪ್ರಕಾರ ರಾಜ್ಯದ ಅಲ್ಲಲ್ಲಿ ಮಳೆ ಬೀಳುವ ಸಂಭವ ಇದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಸಂಜೆ ಅಥವಾ ರಾತ್ರಿ ಬೀಳುವ ಸಾಧ್ಯತೆ ಇದೆ. ದಿನದ ಗರಿಷ್ಠ ಉಷ್ಣಾಂಶ 34ಡಿಗ್ರಿ ಸೆಲ್ಸಿಯಸ್ ಇರಲಿದೆ. ಈ ಅಕಾಲಿಕ ಮಳೆ ಆಗದಿದ್ದಲ್ಲಿ ಬೆಂಗಳೂರಿನ ತಾಪಮಾನ 38 ಡಿಗ್ರಿ ತಲುಪುತ್ತಿತ್ತು ಎಂಬುದು ಪಂಡಿತರ ಲೆಕ್ಕಾಚಾರ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications