ಹದವಾದ ಮಳೆ : ಮುಂಗಾರು ಬಿತ್ತನೆಗೆ ಚಾಲನೆ
ಬೆಂಗಳೂರು : ಏಪ್ರಿಲ್ ತಿಂಗಳಿನಲ್ಲೇ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ ಆಗಿದೆ. ನಿರೀಕ್ಷೆಗೂ ಮೀರಿ ಹದವಾಗಿ ಮಳೆಯಾಗಿರುವ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಕೃಷಿ ಇಲಾಖೆ ಕೂಡ ಮುಂಗಾರು ಬಿತ್ತನೆ ಕಾರ್ಯ ಆರಂಭಿಸುವಂತೆ ರೈತರಿಗೆ ಸಲಹೆ ಮಾಡಿದೆ.
ಬೆಂಗಳೂರು, ಗದಗ, ಮಂಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ ಮೊದಲಾದ ಜಿಲ್ಲೆಗಳಲ್ಲಿ ಅಧಿಕ ಮಳೆ ಆಗಿದ್ದು, ವ್ಯವಸಾಯಕ್ಕೆ ಅನುಕೂಲಕರ ವಾತಾವರಣ ಸೃಷ್ಟಿಸಿದೆ. ಈ ಏಪ್ರಿಲ್‌ನಲ್ಲಿ ರಾಜ್ಯದಲ್ಲಿ ಸರಾಸರಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಚಾಮರಾಜನಗರ, ತುಮಕೂರು, ಮೈಸೂರಿನಲ್ಲಿ ಬಿತ್ತನೆ ಕಾರ್ಯ ಆರಂಭವಾಗಿದೆ.
ಈ ಮಧ್ಯೆ ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆಗಿದೆ. ಚನ್ನಪಟ್ಟಣದಲ್ಲಿ 3 ಸೆಂಟಿ ಮೀಟರ್ ಮಳೆ ಆಗಿದೆ. ರಾಜ್ಯದ ಗರಿಷ್ಠ ತಾಪಮಾನದಲ್ಲಿ ಅಲ್ಪ ಬದಲಾವಣೆ ಆಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಉಷ್ಣಾಂಶ ಸಾಮಾನ್ಯಕ್ಕಿಂತ ಅಧಿಕವಾಗಿತ್ತು.
ರಾಜ್ಯದ ಅತಿ ಹೆಚ್ಚಿನ ತಾಪಮಾನ 44 ಡಿಗ್ರಿ ಸೆಲ್ಸಿಯಸ್ ಗುಲ್ಬರ್ಗಾದಲ್ಲಿ ದಾಖಲಾಗಿತ್ತು. ಮುನ್ಸೂಚನೆಯಂತೆ ಮಳೆ ಅಥವಾ ಗುಡುಗು ಸಹಿತ ಸುರಿಮಳೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಬೀಳುವ ಸಂಭವ ಇದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಭಾಗಶಃ ಮೋಡ ಇದ್ದು, ಮಳೆ ಅಥವಾ ಗುಡುಗು ಸಹಿತ ಸುರಿಮಳೆ ಬೀಳುವ ಸಂಭವ ಇದೆ. ದಿನದ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ತಲುಪಲಿದೆ ಎಂದಿದೆ ಹವಾಮಾನ ವೀಕ್ಷಣಾಲಯದ ವರದಿ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications