ನಗರಸಭೆ- ಪುರಸಭೆ : ಅಧಿಕಾರ ಹಂಚಿಕೆಗೆ ಕಾಂಗ್ರೆಸ್ ಸಿದ್ಧ
ಬೆಂಗಳೂರು : ಅಗತ್ಯವಿರುವ ನಗರಸಭೆ, ಪುರಸಭೆಗಳಲ್ಲಿ ಅಧಿಕಾರ ಸ್ಥಾನ ಪಡೆಯಲು ಇತರೆ ಪಕ್ಷಗಳ ಬೆಂಬಲ ಪಡೆಯಲು ಹಾಗೂ ಅಧಿಕಾರ ಹಂಚಿಕೊಳ್ಳಲು ಕಾಂಗ್ರೆಸ್ ಪಕ್ಷ ಸಿದ್ಧವಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಹೇಳಿದ್ದಾರೆ.
ಮೈಸೂರು, ಹುಬ್ಬಳ್ಳಿ- ಧಾರವಾಡ ಹಾಗೂ ಗುಲ್ಬರ್ಗಾ ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಕೆಲವು ನಗರಸಭೆ, ಪುರಸಭೆಗಳಲ್ಲಿ ಅಧಿಕಾರ ಹಂಚಿಕೆಗೆ ಕಾಂಗ್ರೆಸ್ ಸಿದ್ಧ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಿಮ್ಮನಕಟ್ಟಿ ಪ್ರಕಟಿಸಿದರು. ನಗರಪಾಲಿಕೆ ಮೇಯರ್- ಉಪ ಮೇಯರ್ ಹಾಗೂ ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷರ ಮೀಸಲಾತಿ ಪ್ರಕ್ರಿಯೆಯನ್ನು ರೋಸ್ಟರ್ ಪದ್ಧತಿಗನುಸಾರ ಇನ್ನು 15 ದಿನಗಳೊಳಗಾಗಿ ಪೂರ್ಣಗೊಳಿಸುವುದಾಗಿ ಅವರು ತಿಳಿಸಿದರು.
ಮೈಸೂರು ಹಾಗೂ ಹುಬ್ಬಳ್ಳಿ- ಧಾರವಾಡಗಳಲ್ಲಿ ಜಾತ್ಯತೀತ ಜನತಾದಳದೊಂದಿಗೆ ಕಾಂಗ್ರೆಸ್ ಅಧಿಕಾರ ಹಂಚಿಕೊಳ್ಳಲಿದೆ. ರಾಜ್ಯದ 148 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 98 ಸಂಸ್ಥೆಗಳಲ್ಲಿ ಕಾಂಗ್ರೆಸ್ ನಿಚ್ಚಳ ಬಹುಮತ ಸಾಧಿಸಿದ್ದು , ಉಳಿದೆಡೆಗಳಲ್ಲಿ ಇತರೆ ಪಕ್ಷಗಳೊಂದಿಗೆ ಸೇರಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು. ಆಯ್ಕೆಯಾದ ಎಲ್ಲ ಸದಸ್ಯರನ್ನು ಮೇ ತಿಂಗಳ ಕೊನೆಯಲ್ಲಿ ಬೆಂಗಳೂರಿಗೆ ಕರೆಯಿಸಿ ಅವರುಗಳಿಗೆ ತರಬೇತಿ ಮತ್ತು ಕೈಪಿಡಿ ನೀಡುವ ಪಕ್ಷಾತೀತ ಸಮಾವೇಶವೊಂದನ್ನು ನಡೆಸಲಾಗುವುದು ಎಂದು ಚಿಮ್ಮನಕಟ್ಟಿ ಹೇಳಿದರು.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications