ತೆಹಲ್ಕಾ ಸಂಪಾದಕರ ಕೊಲೆ ಯತ್ನ, ಆರು ಮಂದಿಯ ಬಂಧನ
ನವದೆಹಲಿ : ರಕ್ಷಣಾ ವ್ಯವಹಾರ ಹಗರಣವನ್ನು ಬಯಲು ಮಾಡಿದ ತೆಹಲ್ಕಾ ಡಾಟ್ ಕಾಮ್ನ ಪ್ರಧಾನ ಸಂಪಾದಕ ತರುಣ್ ತೇಜಪಾಲ್ ಅವರನ್ನು ಹತ್ಯೆ ಮಾಡುವ ಐಎಸ್ಐ ಪ್ರಯತ್ನವನ್ನು ದೆಹಲಿ ಪೊಲೀಸರು ವಿಫಲಗೊಳಿಸಿದ್ದು, ಕೊಲೆಗೆ ಯತ್ನಿಸಿದ ಆರು ಮಂದಿಯನ್ನು ಬಂಧಿಸಲಾಗಿದೆ.
ಬಂಧಿತರು ಪಾಕಿಸ್ಥಾನದ ಐಎಸ್ಐ ಬೇಹುಗಾರಿಕಾ ಸಂಸ್ಥೆಯ ಬಾಡಿಗೆ ಹಂತಕರೆಂದು ಗುರುತಿಸಲಾಗಿದೆ. ಎರಡು ಎಕೆ- 47 ರೈಫಲ್, ಪಿಸ್ತೂಲು ಮತ್ತಿತರ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ನೇತೃತ್ವದ ಪೊಲೀಸ್ ತಂಡಕ್ಕೆ ಕೊಲೆ ಸಂಚಿನ ಬಗ್ಗೆ ಸುಳಿವು ಸಿಕ್ಕಿತ್ತು. ನೇಪಾಳದಿಂದ ಟಾಟಾ ಸಫಾರಿ ವಾಹನದಲ್ಲಿ ಬಂದ ದುಷ್ಕರ್ಮಿಗಳ ತಂಡವನ್ನು ಜಹಾಂಗೀರ್ ಪುರಿ ಪ್ರದೇಶದಲ್ಲಿ ಬಂಧಿಸಲಾಯಿತು ಎಂದು ಗುಪ್ತಚರ ವಿಭಾಗದ ಪೊಲೀಸ್ ಆಯುಕ್ತ ಎಸ್. ರಾಮಕೃಷ್ಣನ್ ಹೇಳಿದ್ದಾರೆ.
ರಕ್ಷಣಾ ವ್ಯವಹಾರ ಹಗರಣ ಬಯಲು ಮಾಡಿದ ಕೆಲ ದಿನಗಳಲ್ಲಿಯೇ ತೇಜಪಾಲ್ ಅವರಿಗೆ ಝಡ್ ಫಸ್ಟ್ ಸೆಕ್ಯುರಿಟಿ ಒದಗಿಸಲಾಗಿತ್ತು. ಪ್ರಸ್ತುತ ನಡೆದ ಕೊಲೆ ಯತ್ನ, ದೇಶದಲ್ಲಿ ರಾಜಕೀಯ ಅಸ್ತಿರತೆ ಹುಟ್ಟಿಸುವ ಮತ್ತು ಸರಕಾರದ ಘನತೆಗೆ ಕುಂದು ತರುವ ಉದ್ದೇಶವನ್ನೊಳಗೊಂಡಿತ್ತು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications