148 ಪೌರಸಂಸ್ಥೆಗಳ ಪೈಕಿ 82ರಲ್ಲಿ ಕಾಂಗ್ರೆಸ್ ದಿಗ್ವಿಜಯ
ಬೆಂಗಳೂರು : ಮೇ 3ರ ಗುರುವಾರ ರಾಜ್ಯದ ನಾಲ್ಕು ಮಹಾನಗರ ಪಾಲಿಕೆ ಸೇರಿದಂತೆ ಒಟ್ಟು 148 ಸ್ಥಳೀಯ ಪೌರಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಪಕ್ಷ 3,722 ಸ್ಥಾನಗಳ ಪೈಕಿ 1710 ವಾರ್ಡ್ಗಳಲ್ಲಿ ಗೆದ್ದು 82 ಪೌರಸಂಸ್ಥೆಗಳನ್ನು ಕೈವಶ ಪಡಿಸಿಕೊಂಡಿದೆ.
378 ಸ್ಥಾನಗಳಲ್ಲಿ ಜಯಶಾಲಿಯಾಗಿರುವ ಸಂಯುಕ್ತ ಜನತಾದಳ 378 ವಾರ್ಡ್ಗಳಲ್ಲಿ ಗೆಲ್ಲುವ ಮೂಲಕ 10 ಪೌರಸಂಸ್ಥೆಗಳಲ್ಲಿ ಬಹುಮತ ಪಡೆದಿದೆ. 307 ಸ್ಥಾನ ಗೆದ್ದಿರುವ ಜಾತ್ಯತೀತ ಜನತಾದಳ 307 ವಾರ್ಡ್ಗಳಲ್ಲಿ ಗೆದ್ದು, 7 ಪೌರಸಂಸ್ಥೆಗಳನ್ನು ತನ್ನ ಬಗಲಿಗೆ ಹಾಕಿಕೊಂಡಿದೆ.
ರಾಜ್ಯದಲ್ಲಿ ಪ್ರಮುಖ ಪ್ರತಿಪಕ್ಷವಾಗಿರುವ ಭಾರತೀಯ ಜನತಾಪಾರ್ಟಿ 351 ವಾರ್ಡ್ಗಳಲ್ಲಿ ಗೆಲುವು ಸಾಧಿಸಿದೆಯಾದರೂ, ಅದರ ಕೈವಶವಾಗಿರುವ ಪೌರಸಂಸ್ಥೆಗಳ ಸಂಖ್ಯೆ ಕೇವಲ 4 ಮಾತ್ರ. ಈ ಚುನಾವಣೆಯಲ್ಲಿ ಬಿ.ಜೆ.ಪಿ. ಭಾರಿ ಮುಖಭಂಗ ಅನುಭವಿಸಿದೆ.
ಸಿ.ಪಿ.ಐ 4 ಹಾಗೂ ಬಿ.ಎಸ್.ಪಿ. 8 ವಾರ್ಡ್ಗಳಲ್ಲಿ ಗೆಲುವು ಸಾಧಿಸಿದೆ. ಈ ಬಾರಿಯ ಚುನಾವಣೆಯ ಫಲಿತಾಂಶವನ್ನೇ ತಿರುಗು ಮುರುಗು ಮಾಡಿದ ಪಕ್ಷೇತರರು 943 ವಾರ್ಡ್ಗಳಲ್ಲಿ ದಿಗ್ವಿಜಯ ಸಾಧಿಸಿ, 29 ಪೌರ ಸಂಸ್ಥೆಗಳನ್ನು ಕೈವಶ ಪಡಿಸಿಕೊಂಡಿದ್ದಾರೆ. ಇತರರು 4 ವಾರ್ಡ್ಗಳಲ್ಲಿ ಜಯಶಾಲಿಗಳಾಗಿದ್ದಾರೆ. ನಾಲ್ಕು ವಾರ್ಡ್ಗಳ ಫಲಿತಾಂಶವನ್ನು ತಡೆಹಿಡಿಯಲಾಗಿದೆ. 16 ಪೌರಸಂಸ್ಥೆಗಳಲ್ಲಿ ಯಾವುದೇ ಪಕ್ಷಕ್ಕೂ ನಿಚ್ಚಳ ಬಹುಮತ ಲಭ್ಯವಾಗಿಲ್ಲ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications