ಎಣ್ಣೆ ಹೊಳೆನೀರು ಕಲುಷಿತಗೊಂಡು ಲಕ್ಷಕ್ಕೂಹೆಚ್ಚು ಮೀನು ಸಾವು
ಮೈಸೂರು : ಮಂಡಕಳ್ಳಿ ಸಮೀಪದ ಎಣ್ಣೆ ಹೊಳೆ ಕೆರೆಯಲ್ಲಿನ ನೀರು ಕಲುಷಿತಗೊಂಡು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಮೀನುಗಳು ಸತ್ತಿವೆ.
ಮೈಸೂರು ನಗರದಲ್ಲಿ ಕಳೆದೆರಡು ದಿನಗಳಿಂದ ಬಿದ್ದ ಭಾರೀ ಮಳೆಯಿಂದಾಗಿ ಚರಂಡಿಯ ಕೊಳಚೆ ನೀರು, ಕೆರೆಯನ್ನು ಸೇರಿರುವುದರಿಂದ ಸುಮಾರು 30 ಲಕ್ಷಕ್ಕೂ ಹೆಚ್ಚು ಮೌಲ್ಯದ ಮೀನುಗಳು ಸತ್ತಿವೆ. ನಗರದಿಂದ 12 ಕಿಲೋ ಮೀಟರ್ ದೂರದಲ್ಲಿರುವ ಈ ಕೆರೆಯನ್ನು ಮೈಸೂರು ತಾಲ್ಲೂಕು ಮೀನು ಉತ್ಪಾದಕರ, ಮಾರಾಟಗಾರರ ಸಹಕಾರ ಸಂಘಕ್ಕೆ ಗುತ್ತಿಗೆ ನೀಡಲಾಗಿತ್ತು. ಈ ದುರಂತದಿಂದ ಸಂಘದ ಆಶ್ರಯದಲ್ಲಿ ಮೀನು ವೃತ್ತಿಯನ್ನು ಕೈಗೊಂಡಿದ್ದ 200ಕ್ಕೂ ಹೆಚ್ಚು ಕುಟುಂಬಗಳು ಬೀದಿಪಾಲಾಗಿವೆ.
ಚರಂಡಿ ನೀರು ಕೆರೆಯನ್ನು ಸೇರಿದ್ದರಿಂದ, ನೀರಿನಲ್ಲಿ ಉಸಿರಾಡಲು ಆಮ್ಲಜನಕದ ಕೊರತೆಯಿಂದಾಗಿ ಈ ದುರಂತ ಸಂಭವಿಸಿದೆ ಎಂದು ಕರ್ನಾಟಕ ಸಹಕಾರಿ ಮೀನುಗಾರಿಕೆ ಮಹಾಮಂಡಳಿಯ ಜಂಟಿ ನಿರ್ದೇಶಕ ಬಿ.ಕೆ. ಯದುನಾಥನ್ ಹೇಳಿದ್ದಾರೆ.
ಎಣ್ಣೆ ಹೊಳೆ ನಗರ ಪಾಲಿಕೆ ವ್ಯಾಪ್ತಿಯಿಂದ ಹೊರಗಿರುವುದರಿಂದ ಈ ಘಟನೆಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಹೇಳಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications