ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಿಳೆ ಮೇಲೆ ಪೊಲೀಸರಿಂದಲೇ ಸಾಮೂಹಿಕ ಅತ್ಯಾಚಾರ : ದೂರು

By Staff
|
Google Oneindia Kannada News

ಬೆಂಗಳೂರು : ತನ್ನ ಗಂಡನ ಮೇಲೆ ವ್ಯಕ್ತಿಯಾಬ್ಬ ನಡೆಸಿದ ಹಲ್ಲೆಯ ಪ್ರಕರಣದ ಸಂಬಂಧ ವಿಚಾರಣೆಗಾಗಿ ಠಾಣೆಗೆ ಕರೆತಂದ ಮಹಿಳೆಯಾಬ್ಬರ ಮೇಲೆ ಮೂವರು ಪೊಲೀಸ್‌ ಪೇದೆಗಳು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ.

ಕುಮಾರ ಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಕಗ್ಗಲೀಪುರ ರಸ್ತೆಯಲ್ಲಿ ವಾಸವಾಗಿರುವ ಮಹಿಳೆಯಾಬ್ಬರನ್ನು ಏ.13ರಂದು ರಾತ್ರಿ 11 ಗಂಟೆ ಸಮಯದಲ್ಲಿ ವಿಚಾರಣೆಗೆ ಕರೆತಂದಾಗ, ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ಇರಲಿಲ್ಲ. ಈ ಸಂದರ್ಭದಲ್ಲಿ ಮೂವರು ಪೊಲೀಸ್‌ ಪೇದೆಗಳು ತಮ್ಮ ಮೇಲೆ ಠಾಣೆಯಲ್ಲೇ ಸಾಮೂಹಿಕವಾಗಿ ಅತ್ಯಾಚಾರ ಮಾಡಿದರು ಎಂದು ಆಕೆ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಒಂದು ದಿನ ತನ್ನನ್ನು ಠಾಣೆಯಲ್ಲಿ ಕೂಡಿಹಾಕಿದ್ದರು, ಈ ವಿಷಯ ಯಾರಿಗೂ ತಿಳಿಸದಂತೆ ಹೆದರಿಸಿದ್ದರು, ಮತ್ತೆ ಮಾರನೇ ದಿನ ಬಸ್‌ ಸ್ಟಾಂಡ್‌ನಲ್ಲಿ ನಿಂತಿದ್ದ ತಮ್ಮನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಮತ್ತೊಮ್ಮೆ ಅತ್ಯಾಚಾರಕ್ಕೆ ಯತ್ನಿಸಿದರು ಎಂದೂ ಆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮನೆಗೆಲಸ ಮಾಡುವ 23 ವರ್ಷದ ಮಹಿಳೆ ನೀಡಿರುವ ದೂರನ್ನು ಕುಮಾರಸ್ವಾಮಿ ಲೇಔಟ್‌ ಪೊಲೀಸರು ದಾಖಲಿಸಿಕೊಂಡಿದ್ದು, ನ್ಯಾಯಾಲಯಕ್ಕೆ ಪ್ರಥಮ ಮಾಹಿತಿ ವರದಿ ಕಳುಹಿಸಿದ್ದಾರೆ. ತನಿಖೆ ಮುಂದುವರಿದಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X