ಪುತ್ತೂರಿನಲ್ಲಿ 8 ಸೆಂ.ಮೀ. ಮಳೆ ಆಗಿದೆ ಮಾರಾಯ್ರೆ
ಬೆಂಗಳೂರು : ಕಳೆದ 24 ಗಂಟೆಗಳ ಅವಧಿಯಲ್ಲಿ ಪುತ್ತೂರಿನಲ್ಲಿ 8 ಸೆಂಟಿ ಮೀಟರ್ನಷ್ಟು ಭಾರಿ ಮಳೆ ಆಗಿದೆ. ಕರಾವಳಿಯ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಕೂಡ ಮಳೆ ಬಿದ್ದಿದೆ.
ಮಂಗಳೂರು, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಗುಂಡ್ಲುಪೇಟೆಯಲ್ಲಿ ಕೂಡ ತಲಾ ಒಂದು ಸೆಂಟಿ ಮೀಟರ್ನಷ್ಟು ಮಳೆ ಆಗಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಗರಿಷ್ಠ ತಾಪಮಾನ ಕುಸಿದಿದ್ದರೆ, ಮತ್ತೆ ಕೆಲವೆಡೆ ಹೆಚ್ಚಿತ್ತು. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಅಂತಹ ಮಹತ್ವದ ಬದಲಾವಣೆಗಳೇನೂ ಕಂಡುಬರಲಿಲ್ಲ.
ರಾಜ್ಯದ ಅತಿ ಹೆಚ್ಚು ತಾಪಮಾನ 43 ಡಿಗ್ರಿ ಸೆಲ್ಸಿಯಸ್ ಗುಲ್ಬರ್ಗಾದಲ್ಲಿ ದಾಖಲಾಗಿತ್ತು. ಮುನ್ಸೂಚನೆಯಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಅಲ್ಲಲ್ಲಿ ಮಳೆ ಬೀಳುವ ಸಂಭವ ಇದೆ. ಉತ್ತರ ಒಳನಾಡಿನಲ್ಲಿ ಮಾತ್ರ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ. ಒಟ್ಟಾರೆಯಾಗಿ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳೇನೂ ಕಂಡುಬರುವ ಸಾಧ್ಯತೆ ಇಲ್ಲ.
ಸ್ಥಳೀಯ ಹವಾಮಾನ ಮುನ್ಸೂಚನೆಯ ಪ್ರಕಾರ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣ ಇದ್ದು, ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದಿದೆ ಕೇಂದ್ರ ಹವಾಮಾನ ವೀಕ್ಷಣಾಲಯದ ವರದಿ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications