ಕೃಷ್ಣಾ ನದಿ ವಿವಾದ ಚರ್ಚೆಗೆ ಮೇ 17 ರಂದು ಸರ್ವಪಕ್ಷಗಳ ಸಭೆ
ಬೆಂಗಳೂರು : ಕೃಷ್ಣಾ ನದಿ ನೀರಿನ ಹಂಚಿಕೆ ಹಾಗೂ ಡಬ್ಲ್ಯೂಟಿಓ ಒಪ್ಪಂದದ ಕುರಿತು ರಾಜ್ಯದ ಏಕಾಭಿಪ್ರಾಯವನ್ನು ರೂಪಿಸಲು ಮೇ 17 ರಂದು ಸರ್ವಪಕ್ಷಗಳ ಸಭೆಯನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಕರೆದಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಹುದ್ದೆಗಳ ಸಂದರ್ಶನವನ್ನು ಅಮಾನತ್ತಿನಲ್ಲಿಟ್ಟಿರುವ ಬಗೆಗೆ ಹಾಗೂ ಇನ್ನಿತರೆ ವಿಷಯಗಳ ಕುರಿತು ಕೂಡ ಸರ್ವಪಕ್ಷ ಸಭೆ ಚರ್ಚೆ ನಡೆಸುವುದು ಎಂದು ಕೃಷ್ಣ ಹೇಳಿದರು. ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ವಿವಿಧ ಆರ್ಥಿಕ ವಲಯಗಳ ಬಗ್ಗೆ ಡಬ್ಲ್ಯೂಟಿಓ ಬೀರಬಹುದಾದ ಪರಿಣಾಮಗಳ ಬಗೆಗಿನ ಅಧ್ಯಯನಕ್ಕಾಗಿ ರಾಜ್ಯ ತಜ್ಞರ ಸಮಿತಿಯನ್ನು ರಚಿಸಿದ್ದು , ಇಂಥಾ ಸಮಿತಿಯನ್ನು ರಚಿಸಿದ ಏಕಮಾತ್ರ ರಾಜ್ಯ ಕರ್ನಾಟಕ ಎಂದು ಮುಖ್ಯಮಂತ್ರಿ ಹೆಮ್ಮೆಯಿಂದ ಹೇಳಿಕೊಂಡರು.
ಡಬ್ಲ್ಯೂಟಿಓಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಮೇ 21 ರಂದು ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಪ್ರಧಾನಿ ವಾಜಪೇಯಿ ಕರೆದಿದ್ದಾರೆ. ಈ ಸಭೆಯಲ್ಲಿ ಮೇ 17 ರಂದು ಸರ್ವಪಕ್ಷಗಳ ಸಭೆ ತೆಗೆದುಕೊಳ್ಳುವ ತೀರ್ಮಾನವನ್ನು ಮಂಡಿಸಲಾಗುವುದು ಎಂದು ಕೃಷ್ಣ ಹೇಳಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications