ಕೃಷ್ಣ ಕಂಡಂತೆ ‘ಜಾತ್ಯತೀತ ವರ್ಸಸ್‌ಕೋಮುವಾದಿಗಳ ಯುದ್ಧಾರಂಭ’
ಬೆಂಗಳೂರು : ದೇಶದಲ್ಲಿ ಜಾತ್ಯತೀತ ಹಾಗೂ ಮೂಲಭೂತವಾದಿಗಳ ನಡುವಣ ಯುದ್ಧ ಪ್ರಾರಂಭವಾಗಿದ್ದು , ಐದು ರಾಜ್ಯಗಳ ಚುನಾವಣಾ ಫಲಿತಾಂಶ ಜಾತ್ಯತೀತ ರಾಜಕೀಯ ಪಕ್ಷಗಳ ಧ್ರುವೀಕರಣದ ಚಿಂತನೆಗೆ ಕಾರಣವಾಗಬಹುದೆನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವ್ಯಕ್ತಪಡಿಸಿದ್ದಾರೆ.
ಧ್ರುವೀಕರಣ ಹಾಗೂ ಮರು ಹೊಂದಾಣಿಕೆ ಕುರಿತ ಚರ್ಚೆಗಳು ಈಗಾಗಲೇ ಪ್ರಾರಂಭವಾಗಿವೆ. ಆದರೆ, ಈ ಚರ್ಚೆಗಳು ನಮ್ಮನ್ನು ಎತ್ತ ಒಯ್ಯುತ್ತವೆ ಅನ್ನುವುದು ಗೊತ್ತಿಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು ಹೇಳಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಲ್ಪ ಬಹುಮತ ಹೊಂದಿರುವ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ, ಆ ಕ್ಷೇತ್ರಗಳಲ್ಲಿ ಕಾಂಗ್ರೆಸ್ಸನ್ನು ಜಾತ್ಯತೀತ ಜನತಾದಳ ಬೆಂಬಲಿಸುವುದು ಎಂದು ಆ ಪಕ್ಷದ ಅಧ್ಯಕ್ಷ ಎಸ್. ಸಿದ್ಧರಾಮಯ್ಯ ನೀಡಿರುವ ಹೇಳಿಕೆಯ ಹಿನ್ನೆಲೆಯಲ್ಲಿ ಕೃಷ್ಣ ಈ ಪ್ರತಿಕ್ರಿಯೆ ವ್ಯಕ್ತಪಡಿಸಿದರು.
ತಮಿಳುನಾಡು, ಕೇರಳ, ಪಾಂಡಿಚೆರಿಗಳಲ್ಲಿ ಮಿತ್ರ ಪಕ್ಷಗಳೊಂದಿಗೆ ಕಾಂಗ್ರೆಸ್ ಮುನ್ನಡೆ ಖಚಿತ. ಈ ರಾಜ್ಯಗಳ ಜನತೆ ಬದಲಾವಣೆ ಬಯಸಿದ್ದಾರೆ, ಇತ್ತೀಚಿನ ಚುನಾವಣಾ ಪ್ರಚಾರದಲ್ಲಿ ಈ ವಿಷಯ ತಮಗೆ ಮನದಟ್ಟಾಗಿದೆ ಎಂದು ಅವರು ಹೇಳಿದರು. ಸಿದ್ಧರಾಮಯ್ಯನವರ ಹೇಳಿಕೆಗೆ ಕಾಂಗ್ರೆಸ್ ಸಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತದೆ ಎಂದರು.
ಐದು ರಾಜ್ಯಗಳ ಚುನಾವಣೆಯ ಫಲಿತಾಂಶ ಕೇಂದ್ರ ಸರ್ಕಾರದ ಬಗೆಗೆ ಜನಾದೇಶವೇ ಎನ್ನುವ ಪ್ರಶ್ನೆಗೆ ಉತ್ತರಿಸಲು ಮುಖ್ಯಮಂತ್ರಿ ನಿರಾಕರಿಸಿದರು.
(ಯುಎನ್‌ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications