‘ದೇಶದ ಮಿನಿ ಮಹಾ ಚುನಾವಣೆ’ : ಶೇ.65 ಮತ ಚಲಾವಣೆ
ತಿರುವನಂತಪುರಂ : ಕೇಂದ್ರಾಡಳಿತ ಪ್ರದೇಶವೊಂದು ಸೇರಿದಂತೆ ಐದು ರಾಜ್ಯಗಳಲ್ಲಿ ಗುರುವಾರ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕೆಲವು ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ, ಮತದಾನ ಶಾಂತವಾಗಿದ್ದು ಅಂದಾಜು ಪ್ರತಿಶತ 65 ರಷ್ಟು ಮತ ಚಲಾವಣೆಯಾಗಿದೆ.
ತಮಿಳುನಾಡು (ಶೇ.60), ಕೇರಳ (ಶೇ.73), ಅಸ್ಸಾಂ (ಶೇ.65), ಪಶ್ಚಿಮ ಬಂಗಾಳ (ಶೇ.71) ಹಾಗೂ ಪಾಂಡಿಚೆರಿ (ಶೇ.65) ವಿಧಾನಸಭೆಗಳಿಗೆ ನಡೆದ ಮತದಾನ ದೇಶದ ಮಿನಿ ಮಹಾ ಚುನಾವಣೆ ಎಂದೇ ಬಣ್ಣಿಸಲಾಗಿದ್ದು , ಈ ಚುನಾವಣೆಯಲ್ಲಿ ನಡೆದ ಅಹಿತಕರ ಘಟನೆಗಳಲ್ಲಿ ನಾಲ್ವರು ಮೃತರಾಗಿದ್ದಾರೆ. ಅಸ್ಸಾಂನಲ್ಲಿ 6 ಜನ ಹಾಗೂ ಪಶ್ಚಿಮ ಬಂಗಾಳದಲ್ಲಿ 3 ಮಂದಿ ಚುನಾವಣಾ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ.
ಅಸ್ಸಾಂನ ಡಿಯಾಹರಿ ಎಂಬಲ್ಲಿ ನಡೆದ ಹಿಂಸಾಚಾರದಲ್ಲಿ ಕೇಂದ್ರ ಮೀಸಲು ಪಡೆಯ ಒಬ್ಬ ಸೈನಿಕ ಮೃತನಾಗಿದ್ದು , ಇತರ ಮೂವರು ಗಾಯಗೊಂಡಿದ್ದಾರೆ ಎಂದು ಗುವಾಹತಿ ವರದಿ ತಿಳಿಸಿದೆ. ಅಸ್ಸಾಂ ಹಾಗೂ ಪಶ್ಚಿಮ ಬಂಗಾಳಗಳಲ್ಲಿ ಮತಗಟ್ಟೆ ವಶ ಹಾಗೂ ರಿಗ್ಗಿಂಗ್ ಪ್ರಕರಣಗಳು ಕೆಲವೆಡೆ ದಾಖಲಾಗಿವೆ. ಪಶ್ಚಿಮಬಂಗಾಳದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ದೂರದರ್ಶನದ ಓರ್ವ ಸಿಬ್ಬಂದಿ ಹಾಗೂ ಹುಡುಗಿಯಾಬ್ಬಳು ಗಾಯಗೊಂಡಿದ್ದಾರೆ.
ಭಾನುವಾರ (ಮೇ 13) ಬೆಳಿಗ್ಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು , ಸಂಜೆಯ ವೇಳೆಗೆ ಬಹುತೇಕ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ, ಅಸ್ಸಾಂ ಮುಖ್ಯಮಂತ್ರಿ ಪ್ರಫುಲ್ಲ ಕುಮಾರ್ ಮಹಂತಾ, ತಮಿಳುನಾಡಿನ ಮುಖ್ಯಮಂತ್ರಿ ಎಂ. ಕರುಣಾನಿಧಿ ಹಾಗೂ ಕೇರಳದ ಸಿಎಂಸಿ ಸದಸ್ಯ ಎ.ಕೆ. ಆಂಟನಿ ಅವರ ಭವಿಷ್ಯವನ್ನು ಭಾನುವಾರದ ಮತ ಎಣಿಕೆ ನಿರ್ಧರಿಸಲಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications