ಬೆಂಗಳೂರು : ಬೈವಾಟರ್ನಿಂದ ನೀರುಯೋಜನೆಗೆ ಮರುಜೀವ
ಬೆಂಗಳೂರು : ಪ್ರತಿದಿನ ನಗರಕ್ಕೆ 500 ಮಿಲಿಯನ್ ಲೀಟರ್ ಕಾವೇರಿ ನೀರು ಪೂರೈಸುವ 250 ದಶಲಕ್ಷ ಡಾಲರ್ಗಳ ಬೃಹತ್ ಯೋಜನೆಯ ಪ್ರಸ್ತಾವನೆಯನ್ನು ಗುರುವಾರ ರಾಜ್ಯ ಸರ್ಕಾರಕ್ಕೆ ಬೈ ವಾಟರ್ ಸಂಸ್ಥೆ ಸಲ್ಲಿಸಿದೆ.
ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಗುರುವಾರ ಭೇಟಿ ಮಾಡಿದ ಬೈ ವಾಟರ್ ಸಂಸ್ಥೆಯ ಮುಖ್ಯಸ್ಥರು ಯೋಜನೆಗೆ ಸಂಬಂಧಿಸಿದ ಪರಿಷ್ಕೃತ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಮುಂದಿಟ್ಟರು. ಈ ಸಂದರ್ಭದಲ್ಲಿ ಸಂಪುಟದ ಹಿರಿಯ ಸಚಿವರು ಹಾಜರಿದ್ದರು. ವಾಣಿಜ್ಯೋದ್ದೇಶಕ್ಕಾಗಿ ಕೈಗಾರಿಕೆಗಳು ಬಳಸುವ ನೀರಿನ ದರ ಹಾಗೂ ನಾಗರಿಕರು ಬಳಸುವ ನೀರಿನ ದರಕ್ಕೆ ವ್ಯತ್ಯಾಸವನ್ನು ಹೊಸ ಪ್ರಸ್ತಾವನೆ ಒಳಗೊಂಡಿದೆ.
ಪ್ರಸ್ತಾವನೆ ಸಲ್ಲಿಕೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೈ ವಾಟರ್ ಸಂಸ್ಥೆಯ ಅಧ್ಯಕ್ಷ ಎಡ್ರಿಯನ್-ಇ- ವೈಟ್ ಹೊಸ ಪ್ರಸ್ತಾವನೆ ಹೆಚ್ಚು ಪಾರದರ್ಶಕ ಹಾಗೂ ಜನತೆಗೆ ಅನುಕೂಲಕರವಾಗಿದೆ ಎಂದರು. ಸಂಸ್ಥೆಯು ಸರ್ಕಾರಕ್ಕೆ ಯಾವುದೇ ನಿಬಂಧನೆಗಳನ್ನು ವಿಧಿಸಿಲ್ಲ . ಸರ್ಕಾರ ಈ ಯೋಜನೆಗೆ ಒಪ್ಪಿದಲ್ಲಿ 90 ದಿನಗಳೊಳಗಾಗಿ ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ಅವರು ಹೇಳಿದರು.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications