ಬೆಂಗಳೂರಿನಲ್ಲಿ ಅಂಗವಿಕಲರಿಗೆ ಕಾನೂನು ಮಾರ್ಗದರ್ಶಿ ಘಟಕ
ಬೆಂಗಳೂರು : ಅಂಗವಿಕಲರಿಗೆ ಅಗತ್ಯವಾದ ಕಾನೂನು ನೆರವು ಹಾಗೂ ಮಾರ್ಗದರ್ಶನ ನೀಡುವ ಕಾನೂನು ಘಟಕ ಶನಿವಾರದಿಂದ ನಗರದಲ್ಲಿ ಕಾರ್ಯಾರಂಭ ಮಾಡಲಿದೆ.
ಆಯುಕ್ತರ ಕಚೇರಿ ಅಂಗವಿಕಲರ ಅಧಿನಿಯಮವು ಪರ್ಯಾಯ ಕಾನೂನು ವೇದಿಕೆ ಸಹಕಾರದೊಂದಿಗೆ ನೂತನ ಘಟಕವು ಕಾರ್ಯ ನಿರ್ವಹಿಸಲಿದ್ದು, ಪ್ರಸ್ತುತ ಜಾರಿಯಲ್ಲಿರುವ ಅಂಗವಿಕಲರ ಅಧಿನಿಯಮದಂತೆ ಸಮಾನ ಅವಕಾಶ, ಹಕ್ಕುಗಳ ಸಂರಕ್ಷಣೆ ಮತ್ತು ಪೂರ್ಣ ಭಾಗವಹಿಸುವಿಕೆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ. ಆಯುಕ್ತರ ಕಚೇರಿ ಅಂಗವಿಕಲರ ಅಧಿನಿಯಮದ ಸಹಾಯಕ ಪ್ರದೀಪ್ ಕುಮಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದರು.
ಪ್ರತಿ ಶನಿವಾರ ಮಧ್ಯಾಹ್ನ 2 ರಿಂದ 5 ರವರೆಗೆ ಕಾಕ್ಸ್‌ಟೌನ್‌ನಲ್ಲಿರುವ ಆಯುಕ್ತ ರ ಕಚೇರಿಯಿಂದ ಅಂಗವಿಕಲರು ಯಾವುದೇ ರೀತಿಯ ಕಾನೂನು ನೆರವನ್ನು ಪಡೆಯಬಗಹುದಾಗಿದೆ. ಅಂಗವಿಕಲ ಸಮುದಾಯಕ್ಕೆ ಸಾರ್ವಜನಿಕ ಸೇವೆಗಳು ವಿಳಂಬವಿಲ್ಲದಂತೆ ತಲುಪುವಲ್ಲಿ ಘಟಕ ನಿಗಾ ವಹಿಸುವುದೆಂದು ಅವರು ಹೇಳಿದರು. ಕಾನೂನು ಸಲಹೆ ನೀಡಲು ಘಟಕ ಯಾವುದೇ ಶುಲ್ಕ ಪಡೆಯುವುದಿಲ್ಲ .
1991 ರ ಜನಗಣತಿಯಂತೆ ರಾಜ್ಯದಲ್ಲಿ 3 ಲಕ್ಷ 57 ಸಾವಿರ ಅಂಗವಿಕಲರಿದ್ದು , ಪ್ರಸ್ತುತ ಅವರ ಸಂಖ್ಯೆ ಇನ್ನಷ್ಟು ಹೆಚ್ಚಾಗಿದೆ. ಪ್ರಾರಂಭದಲ್ಲಿ ಬೆಂಗಳೂರಿನಲ್ಲಿ ಮಾತ್ರ ಸ್ಥಾಪಿಸಲಾಗಿರುವ ಘಟಕವನ್ನು ನಂತರದ ದಿನಗಳಲ್ಲಿ ಜಿಲ್ಲಾ , ತಾಲ್ಲೂಕು ಕೇಂದ್ರಗಳಿಗೂ ವಿಸ್ತರಿಸಲು ಉದ್ದೇಶಿಸಲಾಗಿದೆ ಎಂದು ಪ್ರದೀಪ್ ಕುಮಾರ್ ಹೇಳಿದರು. ಹೆಚ್ಚಿನ ಮಾಹಿತಿ ಅಥವಾ ನೆರವು ಪಡೆಯಲು ಬಯಸುವವರು 080-5482639, 080-5482641 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications