ಮೈಸೂರು : ರೈಲ್ವೆ ಇಲಾಖೆ ನಿರ್ಲಕ್ಷ್ಯ ಪ್ರತಿಭಟಿಸಿ ಶನಿವಾರ ರೈಲು ತಡೆ
ಮೈಸೂರು : ಬೆಂಗಳೂರು ಬ್ರಾಡ್ಗೇಜ್ ರೈಲ್ವೆ ಮಾರ್ಗ ನಿರ್ಮಾಣದಿಂದ ಉಂಟಾಗಿರುವ ಅನಾನುಕೂಲಗಳನ್ನು ಸರಿಪಡಿಸುವಲ್ಲಿ ರೈಲ್ವೆ ಇಲಾಖೆ ತೋರುತ್ತಿರುವ ನಿರ್ಲಕ್ಷ್ಯವನ್ನು ಪ್ರತಿಭಟಿಸಲು ಮೈಸೂರು ತಾಲ್ಲೂಕಿನ ನಾಗನಹಳ್ಳಿ ಹಾಗೂ ಸುತ್ತುಮುತ್ತಲ ಗ್ರಾಮಸ್ಥರು ರೈಲು ತಡೆ ನಡೆಸಲು ನಿಶ್ಚಯಿಸಿದ್ದಾರೆ.
ರೈತಸಂಘದ ನೇತೃತ್ವದಲ್ಲಿ ಶನಿವಾರ ಬೆಳಿಗ್ಗೆ ರೈಲು ತಡೆ ಪ್ರತಿಭಟನೆ ನಡೆಯಲಿದೆ. ಬ್ರಾಡ್ಗೇಜ್ ನಿರ್ಮಾಣದ ನಂತರ ನಾಗನಹಳ್ಳಿ ಹಾಗೂ ಸುತ್ತಲ ಗ್ರಾಮಗಳ ಜನರು ತಮ್ಮ ಹೊಲ- ಮನೆಗಳಿಗೆ ಹೋಗಿ ಬರಲು ತೊಂದರೆಯಾಗಿದೆ. ಶವಗಳನ್ನು ಸ್ಮಶಾನಕ್ಕೆ ಸಾಗಿಸಲು ಕೂಡ ತೊಂದರೆಯಾಗಿದೆ. ಈ ವಿಷಯವನ್ನು ರೈಲ್ವೆ ಇಲಾಖೆಯ ಗಮನಕ್ಕೆ ತಂದಿದ್ದರೂ, ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದರಿಂದ ರೈಲು ತಡೆ ನಡೆಸುತ್ತಿದ್ದೇವೆ ಎಂದು ರೈತಸಂಘದ ನಾಗನಹಳ್ಳಿ ಶಾಖೆಯ ಅಧ್ಯಕ್ಷ ಕುಮಾರಸ್ವಾಮಿ ಸುದ್ದಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗ್ರಾಮಸ್ಥರಿಗೆ ಉಂಟಾಗಿರುವ ತೊಂದರೆಯನ್ನು ನಿವಾರಿಸಲು ಹಳಿಗಳಿಂದ ಯಾವುದೇ ಸಮಸ್ಯೆ ಉಂಟಾಗದ ರೀತಿಯಲ್ಲಿ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರು ರೈಲ್ವೆ ಇಲಾಖೆಯನ್ನು ಒತ್ತಾಯಿಸುತ್ತಿದ್ದಾರೆ ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications