ಮಹಾರಾಷ್ಟ್ರದಿಂದ ಭೀಮಾ ನದಿಗೆ ಶನಿವಾರ ನೀರು ಬಿಡುಗಡೆ?
ಬಿಜಾಪುರ : ನೀರಿಲ್ಲದೆ ಒಣಗಿಹ ಭೀಮಾನದಿಗೆ ಉಜ್ಜಿನಿ ಜಲಾಶಯದಿಂದ ನೀರು ಬಿಡಲು ಮಹಾರಾಷ್ಟ್ರ ಸರಕಾರ ಸಮ್ಮತಿಸಿದ್ದು, ಶನಿವಾರ ಸಂಜೆಯ ವೇಳೆಗೆ ನದಿಗೆ ನೀರು ಹರಿದುಬರುವ ಸಾಧ್ಯತೆ ಇದೆ. ಈ ವಿಷಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಕಾಶಪ್ಪನವರ್ ತಿಳಿಸಿದ್ದಾರೆ.
ಈಗಾಗಲೇ ಉಜ್ಜಿನಿ ಜಲಾಶಯದಿಂದ ನೀರು ಬಿಡಲಾಗಿದ್ದು, ಅದನ್ನು ಸಿರನಾಳ - ಔಜ್ ಬ್ಯಾರೇಜ್ನಲ್ಲಿ ಸಂಗ್ರಹಿಸಲಾಗಿದೆ. ಈ ಜಲಾಶಯದ ಗೇಟ್ ತೆರೆದು, ಭೀಮಾ ನದಿಗೆ ನೀರು ಬಿಡುವ ಸಂಬಂಧ ಮಹಾರಾಷ್ಟ್ರ ಸಚಿವ ಆನಂದರಾವ್ ದೇವಕತೆ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ಸೊಲ್ಲಾಪುರದಲ್ಲಿ ಅಧಿಕಾರಿಗಳ ಸಭೆ ಕರೆದಿದ್ದು, ಜಲಾಶಯದಿಂದ ಎಷ್ಟು ನೀರು ಹೊರಬಿಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ನೀರಿಲ್ಲದೆ, ಭೀಮಾ ನದಿ ತೀರದ ಜನ - ಜಾನುವಾರುಗಳು ಪಡುತ್ತಿರುವ ಸಂಕಟವನ್ನು ನಿವಾರಿಸಲು, ಮಾನವೀಯ ದೃಷ್ಟಿಯಿಂದ ನೀರು ಬಿಡಲು ಒಪ್ಪಿರುವ ಮಹಾರಾಷ್ಟ್ರ ಸರಕಾರ ಶನಿವಾರ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಜಲಾಶಯದ ಗೇಟ್ ತೆರೆದು ರಾಜ್ಯಕ್ಕೆ ನೀರು ಹರಿಸಲಿದೆ. ಈ ಸಂಬಂಧ ಆನಂದರಾವ್ ದೇವಕತೆ ಹಾಗೂ ಕಾಶಪ್ಪನವರ್ ಶುಕ್ರವಾರ ಸಮಾಲೋಚನೆ ನಡೆಸಿದ್ದಾರೆ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications