ಸಿಇಟಿ : ದೆಹಲಿಯಿಂದ ಬೆಂಗ್ಳೂರಿಗೆ ಹೆಚ್ಚುವರಿ ರೈಲು ಬೋಗಿ
ನವದೆಹಲಿ : ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕಾಗಿ ರಾಜ್ಯದಲ್ಲಿ ಮೇ 16 ಮತ್ತು 17ರಂದು ನಡೆಯಲಿರುವ ಪ್ರತಿಷ್ಠಿತ ಸಿ.ಇ.ಟಿ. ಪರೀಕ್ಷೆಗೆ ರಾಷ್ಟ್ರದ ವಿವಿಧ ಭಾಗಗಳಿಂದ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದೆಹಲಿಯಿಂದ ಬೆಂಗಳೂರಿಗೆ ಬರುವ ಕರ್ನಾಟಕ ಎಕ್ಸ್ಪ್ರೆಸ್ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.
ಮೇ 12ರ ಶನಿವಾರ ಮತ್ತು 13ರ ಭಾನುವಾರ ನವದೆಹಲಿಯಿಂದ ಹೊರಡುವ ಕರ್ನಾಟಕ ಎಕ್ಸ್ಪ್ರೆಸ್ ರೈಲುಗಾಡಿ ಸಂಖ್ಯೆ 2628 ಮತ್ತು 12ರ ಶನಿವಾರ ಹಾಗೂ 14ರ ಸೋಮವಾರ ಹಳೆದೆಹಲಿಯ ಹಜರತ್ ನಿಜಾಮುದ್ದೀನ್ನಿಂದ ಹೊರಡುವ ರಾಜಧಾನಿ ರೈಲುಗಾಡಿ ಸಂಖ್ಯೆ 2430ಕ್ಕೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗುವುದು ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.
ಅಲ್ಲದೆ ಹಜರತ್ ನಿಜಾಮುದ್ದೀನ್ನಿಂದ ಬೆಂಗಳೂರಿಗೆ ಹೊರಡುವ 660 ಎ ಮತ್ತು 660 ಬಿ ವಿಶೇಷ ರೈಲುಗಳಿಗೂ ಕೂಡ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲಾಗುವುದು ಎಂದು ರೈಲ್ವೆಯ ಅಧಿಕೃತ ಮೂಲಗಳು ತಿಳಿಸಿವೆ. ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಕೂಡ ವಿದ್ಯಾರ್ಥಿಗಳಿಗೆ ವಸತಿ ಹಾಗೂ ಪ್ರವಾಸದ ವ್ಯವಸ್ಥೆ ಮಾಡಿದೆ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications