ಪಿ.ಯು.ಸಿ ಪರೀಕ್ಷಾ ಫಲಿತಾಂಶವೂ ವಿಳಂಬವಾಗುವ ಸೂಚನೆ
ಬೆಂಗಳೂರು : ಮೇ 5ರಂದೇ ಪ್ರಕಟವಾಗಬೇಕಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು 5 ದಿನ ತಡವಾಗಿ ಪ್ರಕಟವಾಗಿ ಹಲವು ಗೊಂದಲವನ್ನೇ ಸೃಷ್ಟಿಸಿತ್ತು. ಈಗ ಫಲಿತಾಂಶ ವಿಳಂಬದ ಸರದಿ ಪಿ.ಯು.ಸಿ. ಪರೀಕ್ಷೆಗಳದಾಗಿದೆ. ದ್ವಿತೀಯ ಪಿ.ಯು.ಸಿ. ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆಮೆಗತಿಯಲ್ಲಿ ಸಾಗುತ್ತಿದ್ದು ಫಲಿತಾಂಶ ಪ್ರಕಟಣೆ ವಿಳಂಬವಾಗುವ ಸೂಚನೆಗಳು ದೊರೆತಿವೆ.
ಕಳೆದ ವರ್ಷ ಪಿ.ಯು.ಸಿ. ಶಿಕ್ಷಕರ ಮೌಲ್ಯಮಾಪನ ಬಹಿಷ್ಕಾರದ ಕಾರಣ ಮೌಲ್ಯಮಾಪನ ಕಾರ್ಯ ತಿಂಗಳುಗಟ್ಟಲೆ ತಡವಾಗಿತ್ತು. ಎಸ್ಮಾ ಜಾರಿ ಮಾಡುವಂತಹ ಕಠಿಣ ಕ್ರಮವನ್ನೂ ಸರಕಾರ ಕೈಗೊಂಡಿತ್ತು. ಈ ಬಾರಿ ಶಿಕ್ಷಕರು ಅಂತಹ ಯಾವುದೇ ಪ್ರತಿಭಟನೆ ನಡೆಸದಿದ್ದರೂ, ಕಪ್ಪು ಪಟ್ಟಿ ಧರಿಸಿ ಮೌಲ್ಯಮಾಪನ ಕಾರ್ಯದಲ್ಲಿ ಪಾಲ್ಗೊಂಡರು.
ಪಿಯುಸಿ ವಿದ್ಯಾರ್ಥಿಗಳು ಹಾಗೂ ಪಾಲಕರು ಸದ್ಯ ಈ ವರ್ಷವಾದರೂ ಶಿಕ್ಷಕರಿಗೆ ಬುದ್ಧಿ ಬಂತಲ್ಲ ಎಂದು ನಿಟ್ಟುಸಿರು ಬಿಡುತ್ತಿರುವಾಗಲೇ ಫಲಿತಾಂಶ ವಿಳಂಬವಾಗುವ ಸುದ್ದಿ ಸಿಡಿಲಿನಂತೆ ಬಂದಪ್ಪಳಿಸಿದೆ. ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಮೇಲ್ವಿಚಾರಕರು ಹಾಗೂ ಮೌಲ್ಯಮಾಪಕರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆ ಇರುವುದೇ ಇದಕ್ಕೆ ಕಾರಣ ಎಂದು ಪದವಿಪೂರ್ವ ಶಿಕ್ಷಣ ಮಂಡಳಿ ಮೂಲಗಳು ತಿಳಿಸಿವೆ.
ಆದಾಗ್ಯೂ, ತ್ವರಿತಗತಿಯಲ್ಲಿ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ, ಫಲಿತಾಂಶವನ್ನು ನಿಗದಿತ ಸಮಯಕ್ಕೇ ಪ್ರಕಟಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಮೂಲಗಳು ತಿಳಿಸಿವೆ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications