‘ಕರುಣಾನಿಧಿ ಅವರನ್ನು ಕೃಷ್ಣ ಅನುಸರಿಸಲಿ ’-ಎಲ್.ಎಸ್. ಶೇಷಗಿರಿರಾವ್
ಬೆಂಗಳೂರು : ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಮಾದರಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಕೂಡ, ದೇಶದ ಯಾುವುದೇ ಭಾಗದಲ್ಲಿ ಮಾತನಾಡಿದರೂ ಕನ್ನಡದಲ್ಲೇ ಮಾತನಾಡಬೇಕೆಂದು ಹಿರಿಯ ವಿಮರ್ಶಕ ಪ್ರೊ. ಎಲ್.ಎಸ್.ಶೇಷಗಿರಿ ರಾವ್ ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕರುಣಾನಿಧಿ ಎದುರಿನಲ್ಲೇ ಕೃಷ್ಣ ಅವರು ಇಂಗ್ಲೀಷ್‌ನಲ್ಲಿ ಮಾತನಾಡುತ್ತಾರೆ. ಈ ನಡವಳಿಕೆಯನ್ನು ಬದಲಿಸಿಕೊಂಡು ಕನ್ನಡದಲ್ಲೇ ಮಾತನಾಡುವ ಮೂಲಕ ಕನ್ನಡ ವಾತಾವರಣ ಸೃಷ್ಟಿಸಲು ಮುಖ್ಯಮಂತ್ರಿಗಳು ಮುಂದಾಗಬೇಕೆಂದು ಶೇಷಗಿರಿ ರಾವ್ ಹೇಳಿದರು. ಶನಿವಾರ ಜರುಗಿದ ಜಯನಗರ ವಿಧಾನಸಭಾ ಕ್ಷೇತ್ರದ ಎರಡನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಕನ್ನಡ ಪುಸ್ತಕೋದ್ಯಮದ ಸ್ಥಿತಿಗತಿ ಬಗ್ಗೆ ಸಮೀಕ್ಷೆ ಅಗತ್ಯ
ಕನ್ನಡ ಪುಸ್ತಕೋದ್ಯಮದ ಮೇಲೆ ಜಾಗತೀಕರಣ ಪರಿಣಾಮ ಬೀರಿದೆಯೇ ಅನ್ನುವುದನ್ನು ಖಚಿತವಾಗಿ ಹೇಳಲು ಸಾಧ್ಯವಿಲ್ಲ . ಈವರೆಗೂ ಇದರ ಬಗೆಗೆ ಸಮೀಕ್ಷೆಯೇ ನಡೆದಿಲ್ಲ ಉದಾರೀಕರಣ ಅಥವಾ ಜಾಗತೀಕರಣ ಕನ್ನಡ ಪುಸ್ತಕೋದ್ಯಮದ ಮೇಲೆ ಯಾವ ರೀತಿ ಪರಿಣಾಮ ಬೀರಿದೆ ಅನ್ನುವ ಬಗ್ಗೆ ಕನ್ನಡ ಪುಸ್ತಕ ಪ್ರಾಧಿಕಾರ ಸಮೀಕ್ಷೆ ನಡೆಸಬೇಕು. ಮಾಹಿತಿ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ವಿದೇಶಿ ಪ್ರಕಾಶನದೊಂದಿಗೆ ಕನ್ನಡ ಪುಸ್ತಕೋದ್ಯಮ ಸ್ಪರ್ಧೆ ನಡೆಸಲು ಸಾಧ್ಯವೇ ಅನ್ನುವ ಬಗೆಗೂ ಸಮೀಕ್ಷೆ ನಡೆಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಬೆಳಗಾವಿ ಜಿಲ್ಲೆಯ ಯಳ್ಳೂರು ಗ್ರಾಮ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಇದೇ ರೀತಿಯ ನಿರ್ಲಕ್ಷ್ಯ ತೋರಿದಲ್ಲಿ ಗಡಿ ಪ್ರದೇಶದ ಅನೇಕ ಗ್ರಾಮಗಳು ರಾಜ್ಯದ ಕೈ ತಪ್ಪುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.
ಭವಿಷ್ಯಕ್ಕಾಗಿ ಇಂಗ್ಲೀಷೂ ಬೇಕು, ಕನ್ನಡದಷ್ಟೇ ಪ್ರಾಧಾನ್ಯತೆ ಕೊಡಿ !
ನಾಡಿಗರ ಭವಿಷ್ಯದ ದೃಷ್ಟಿಯಿಂದ ಕನ್ನಡ ಭಾಷೆಗೆ ನೀಡಿದಷ್ಟೇ ಪ್ರಾಮುಖ್ಯತೆಯನ್ನು ಇಂಗ್ಲೀಷಿಗೂ ನೀಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಐಟಿ ಯುಗದಲ್ಲಿ ಪೈಪೋಟಿ ಎದುರಿಸುವುದಕ್ಕೋಸ್ಕರವಾದರೂ ಕನ್ನಡಿಗರು ಇಂಗ್ಲೀಷ್ ಕಲಿಯಬೇಕಾದುದು ಅನಿವಾರ್ಯವಾಗಿದೆ ಎಂದು ಸಮ್ಮೇಳನವನ್ನು ಉದ್ಘಾಟಿಸಿದ ಪ್ರಸಿದ್ಧ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಹೇಳಿದರು.
ಸಾಹಿತಿಗಳು ಕಠಿಣ ಪದಗಳನ್ನು ಬಳಸುವ ಬದಲು ಜನ ಸಾಮಾನ್ಯರಿಗೂ ಮುಟ್ಟುವ ಸರಳ ಪದಗಳನ್ನು ಸಾಹಿತ್ಯದಲ್ಲಿ ಬಳಸಬೇಕು ಎಂದರು. ಅನೇಕ ಸಣ್ಣ ಪುಟ್ಟ ಭಾಷೆಗಳ ಸಾಹಿತ್ಯ ವಿಶ್ವಮಾನ್ಯತೆ ಪಡೆದಿರುವಾಗ ಕನ್ನಡ ಆ ಮಟ್ಟ ಮುಟ್ಟದಿರುವುದು ವಿಷಾದನೀಯ. ಕುವೆಂಪು, ಕಾರಂತರಂಥ ಮಹನೀಯರ ಕೃತಿಗಳನ್ನು ಇಂಗ್ಲೀಷ್‌ಗೆ ಅನುವಾದ ಮಾಡಿಸುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ ಕೈಗೆತ್ತಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಸಾಹಿತಿ ಡಾ. ಪಿ.ವಿ. ನಾರಾಯಣ, ಶಾಸಕ ರಾಮಲಿಂಗಾರೆಡ್ಡಿ ಮುಂತಾದವರು ಸಮ್ಮೇಳನದಲ್ಲಿ ಹಾಜರಿದ್ದರು.(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications