ನಿದ್ದೆ ಮಾಡುವ ಅಧಿಕಾರಿಗಳನ್ನು ಬಡಿದೆಬ್ಬಿಸಲು ಕೃಷ್ಣರ ನಾರದ ಸಂಚಾರ
ಬೆಂಗಳೂರು : ಶಾಸಕರಾಗಿ ಆಯ್ಕೆ ಆದವರು, ತಮ್ಮ ಕ್ಷೇತ್ರದಲ್ಲಿ ಸಂಚರಿಸಿ, ಜನರ ಕಷ್ಟ ಸುಖ ಅರಿತು, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚಿಂತಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರಾದವರು, ಜಿಲ್ಲೆಯಾದ್ಯಂತ ಸುತ್ತಾಡಬೇಕು. ಇನ್ನು ಮುಖ್ಯಮಂತ್ರಿಗಳು ರಾಜ್ಯವನ್ನೇ ಪ್ರದಕ್ಷಿಣೆ ಮಾಡಬೇಕು.
ಈಗ ನಮ್ಮ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರೂ ಇದೇ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರನ್ನು ಸಿಂಗಪೂರ್ ಮಾದರಿಯ ಹೈಟೆಕ್ ಸಿಟಿ ಮಾಡಬೇಕೆಂಬ ಕನಸು ಕಟ್ಟಿರುವ ಕೃಷ್ಣ, ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ತೀವ್ರ ಚಾಲನೆ ನೀಡುವ ಸಲುವಾಗಿ ಮೇ 20ರ ಭಾನುವಾರದಿಂದ ನಗರ ಪ್ರದಕ್ಷಿಣೆ ಮಾಡುತ್ತಿದ್ದಾರೆ.
ಈ ಸಂಬಂಧ ಅವರು, ಸೋಮವಾರ ಬೆಂಗಳೂರಿನ ಶಾಸಕರೊಂದಿಗೆ ಚರ್ಚೆ ನಡೆಸಿದರು. 20ರಂದು ನಗರದ ವಿವಿಧ ಭಾಗಗಳಿಗೆ ಭೇಟಿ ನೀಡಲಿರುವ ಅವರು, ನಡೆಯುತ್ತಿರುವ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿ, ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರವನ್ನೂ ಸೂಚಿಸಲಿದ್ದಾರೆ. ವರ್ಷದ ಹಿಂದೆ ಕೂಡ ಮುಖ್ಯಮಂತ್ರಿಗಳು ಒಮ್ಮೆ ನಗರ ಪ್ರದಕ್ಷಿಣೆ ಮಾಡಿ, ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದ್ದರು.
ತಾವು ಅಂದು ನೀಡಿದ ಸೂಚನೆಗಳು ಕಾರ್ಯಗತವಾಗಿವೆಯೇ ಇಲ್ಲವೇ ಎಂಬುದನ್ನು ಅವರು ಪರಿಶೀಲಿಸಲಿದ್ದಾರೆ. 20 ರಂದು ಮುಖ್ಯಮಂತ್ರಿಗಳು ನಗರ ಪ್ರದಕ್ಷಿಣೆ ಕೈಗೊಳ್ಳಲಿದ್ದಾರೆ ಎಂಬ ಸುದ್ದಿ ತಿಳಿದ ಅಧಿಕಾರಿಗಳು ಇನ್ನೊಂದು ವಾರ ನಿದ್ದೆಗೆಡುವುದು ಖಚಿತ. ಪಾಲಿಕೆಯ ಕೆಲವು ಅಧಿಕಾರಿಗಳು ಸೋಮವಾರವೇ, ಕೆ.ಆರ್. ಮಾರ್ಕೆಟ್ ಇತರ ಪ್ರದೇಶಗಳಿಗೆ ಭೇಟಿ ನೀಡಿ, ಪ್ರದೇಶವನ್ನು ಶುಚಿಯಾಗಿಡುವಂತೆ ಸಿಬ್ಬಂದಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications