ವಿಪ್ರೋ ಸಂಸ್ಥೆಯಿಂದ ಮದ್ದೂರಿನ ಎಲ್ಲ ಸರ್ಕಾರಿ ಶಾಲೆಗಳ ದತ್ತು
ಮದ್ದೂರು : ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ತವರೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಎಲ್ಲ ಸರಕಾರಿ ಶಾಲೆಗಳನ್ನು ರಾಷ್ಟ್ರದ ಹೆಸರಾಂತ ಸಾಫ್ಟ್‌ವೇರ್ ಉದ್ದಿಮೆ ವಿಪ್ರೋ ಸಂಸ್ಥೆಗೆ ದತ್ತು ನೀಡಲಾಗಿದೆ. ಸಂಸ್ಥೆಯ ಅಧ್ಯಕ್ಷ ಪ್ರೇಂಜಿ ಅವರು ಈ ಶಾಲೆಗಳ ದುರಸ್ತಿ, ನಿರ್ವಹಣೆ ಹಾಗೂ ಉಸ್ತುವಾರಿಯನ್ನು ವಹಿಸಿಕೊಳ್ಳಲಿದ್ದಾರೆ.
ಈ ವಿಷಯವನ್ನು ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ತಿಳಿಸಿದ್ದಾರೆ. ಮದ್ದೂರು ತಾಲೂಕಿನ ಕಾಡುಕೊತ್ತನಹಳ್ಳಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.
ಎಲ್ಲ ಸರಕಾರಿ ಶಾಲೆಗಳನ್ನೂ ಅಭಿವೃದ್ಧಿಪಡಿಸಿ, ಅವುಗಳ ಉಸ್ತುವಾರಿ ನೋಡಿಕೊಳ್ಳುವುದು ಕೇವಲ ಸರಕಾರದಿಂದ ಮಾತ್ರ ಸಾಧ್ಯವಿಲ್ಲ. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಸರಕಾರದೊಂದಿಗೆ ಕೈ ಜೋಡಿಸಿದರೆ, ಸರಕಾರಿ ಶಾಲೆಗಳೂ, ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲ ಎನ್ನುವಂತೆ ಮಾಡಬಹುದು ಎಂದರು.
ರಾಜ್ಯದ ಯಾವುದೇ ಹಳ್ಳಿಯಲ್ಲಿ ಶಾಲೆಯಾಂದನ್ನು ಆರಂಭಿಸುವ ಮುನ್ನ ಅದರ ನಿರ್ವಹಣೆ ಹೇಗೆ ಎಂಬ ಬಗ್ಗೆ ಚಿಂತಿಸಬೇಕು. ಇಂತಹ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಲು ಮುಂದೆ ಬರುವ ಪ್ರತಿಷ್ಠಿತ ಸಂಘ - ಸಂಸ್ಥೆಗಳಿಗೆ ದತ್ತು ನೀಡಲು ಸರಕಾರ ತೀರ್ಮಾನಿಸಿದೆ ಎಂದರು.
ಶಾಲೆ ಬಿಡುವ ಮಕ್ಕಳ ಸಂಖ್ಯೆಗೆ ಕಡಿವಾಣ ಹಾಕಲು ಸರಕಾರ ವಿವಿಧ ಯೋಜನೆಗಳನ್ನು ಆರಂಭಿಸಿದೆ. ಮಕ್ಕಳಿಗೆ ಹಾಗೂ ಪೋಷಕರಿಗೆ ಶಿಕ್ಷಣದ ಮಹತ್ವ ತಿಳಿಸುವ ಕಾರ್ಯಕ್ರಮ ನಡೆಯುತ್ತಿದೆ. ಚಿಣ್ಣರ ಅಂಗಳ ಕಾರ್ಯಕ್ರಮ ಯಶಸ್ವಿಯಾಗಿದೆ. ನಿರಂತರ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು. ಪ್ರತಿ ಜಿಲ್ಲಾ ಕೇಂದ್ರದಲ್ಲೂ ಹಾಸ್ಟೆಲ್ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ತಿಳಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications