‘ಅಮೇರಿಕೆಯಲ್ಲಿನ ಐಟಿ ತಜ್ಞರ ವಾಪಸ್ಸಾತಿಗೆ ಆತಂಕ ಬೇಕಿಲ್ಲ ’
ಬೆಂಗಳೂರು : ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಸ್ತುತ ಕಂಡುಬರುತ್ತಿರುವ ಹಿನ್ನಡೆ ತಾತ್ಕಾಲಿಕ. ಈ ಬೆಳವಣಿಗೆ ಮಾಹಿತಿ ತಂತ್ರಜ್ಞಾನ ಉದ್ಯಮದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಅಮೇರಿಕೆಯಲ್ಲಿನ ಐಟಿ ತಜ್ಞರು ಭಾರತಕ್ಕೆ ವಾಪಸ್ಸಾಗುತ್ತಿರುವ ಬಗ್ಗೆ ಆತಂಕ ಪಡಬೇಕಾಗಿಲ್ಲ. ಪ್ರತಿದಿನವೂ ಬೆಳವಣಿಗೆ ಹೊಂದುತ್ತಿರುವ ಐಟಿ ಉದ್ಯಮ ಈ ಹಿನ್ನಡೆಗಳನ್ನು ಅರಗಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ. ವೃತ್ತಿಪರ ಇಂಜಿನಿಯರ್‌ಗಳ ಬೇಡಿಕೆ ಯಾವತ್ತಿಗೂ ಕುಗ್ಗುವುದಿಲ್ಲ ಎಂದು ಪರಮೇಶ್ವರ್ ಹೇಳಿದರು. ಸಣ್ಣ ಕೈಗಾರಿಕಾ ಸೇವಾ ಸಂಸ್ಥೆ ಹಾಗೂ ಸಿಸ್ಟೆಲ್ ಕಂಪ್ಯೂಟರ್ ಶಿಕ್ಷಣ ಸಂಸ್ಥೆ ಜಂಟಿಯಾಗಿ ಹಮ್ಮಿಕೊಂಡಿದ್ದ ಸ್ವಯಂ ಉದ್ಯೋಗ ಯೋಜನೆ ಮತ್ತು ನೈಪುಣ್ಯ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
2008 ರ ವೇಳೆಗೆ ದೇಶದಲ್ಲಿ 22.5 ಲಕ್ಷ ಇಂಜಿನಿಯರ್‌ಗಳಿಗೆ ಬೇಡಿಕೆ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹೆಚ್ಚಿನ ವೃತ್ತಿಪರರನ್ನು ರೂಪಿಸಲು ಪ್ರಯತ್ನಿಸಲಿದೆ ಎಂದರು. ತರಬೇತಿಯಿಲ್ಲದ ಪದವಿಗಳು ಸಾಮಾಜಿಕವಾಗಿ ಹಾಗೂ ವೈಯಕ್ತಿಕವಾಗಿ ಉಪಯುಕ್ತವಲ್ಲ . ಹೆಚ್ಚಿನ ಆದಾಯ ತರುವ ಕಂಪ್ಯೂಟರ್ ಶಿಕ್ಷಣ ಕಲಿಕೆ ಅಗತ್ಯ ಎಂದು ಪರಮೇಶ್ವರ್ ಅಭಿಪ್ರಾಯ ಪಟ್ಟರು.
ಇದೇ ಸಂದರ್ಭದಲ್ಲಿ ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಪ್ರೊ.ಟಿ. ಶಿವಣ್ಣ ಸ್ವಯಂ ಉದ್ಯೋಗ ಯೋಜನೆಯಡಿ ತರಬೇತಿ ಪಡೇದವರಿಗೆ ಪ್ರಶಸ್ತಿಪತ್ರ ವಿತರಿಸಿದರು. ಎಸ್‌ಐಎಸ್‌ಐ ನಿರ್ದೇಶಕ ಎಂ. ಮಹಾಬಲ, ಉಪ ನಿರ್ದೇಶಕ ಸಿ.ಆರ್.ಬದರಿನಾಥ್ ಹಾಗೂ ಸಿಸ್ಟೆಲ್‌ನ ನಿರ್ದೇಶಕ ಎನ್.ಮುರಳೀಧರ್ ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications