ಎಸ್ಸೆಸ್ಸೆಲ್ಸಿ ಸಪ್ಲಿಮೆಂಟರಿ ಜೂನ್ 9ರಿಂದ 14ಕ್ಕೆ ಮುಂದೂಡಿಕೆ
ಬೆಂಗಳೂರು : ತರಾತುರಿಯಲ್ಲಿ ಪರೀಕ್ಷೆ ಫಲಿತಾಂಶ ನೀಡಿ, ಸಾಕಷ್ಟು ಗೊಂದಲ ಹುಟ್ಟುಹಾಕಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಪ್ಲಿಮೆಂಟರಿ ಪರೀಕ್ಷೆಯನ್ನು ಮುಂದಕ್ಕೆ ಹಾಕಿದೆ. ಜೂನ್ 9ಕ್ಕೆ ನಡೆಯಬೇಕಿದ್ದ ಸಪ್ಲಿಮೆಂಟರಿ ಪರೀಕ್ಷೆ ಜೂನ್ 14ರಂದು ನಡೆಯಲಿದೆ.
ಸಪ್ಲಿಮೆಂಟರಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 17ನ್ನು ಕೊನೆ ದಿನಾಂಕ ಎಂದು ನಿಗದಿ ಪಡಿಸಲಾಗಿತ್ತು. ಈಗ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 21. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಎನ್.ಡಿ.ಭಟ್ ಸೋಮವಾರ ಈವಿಷಯ ತಿಳಿಸಿದ್ದಾರೆ. ಈ ಮೊದಲು ಎಸ್ಸೆಸ್ಸೆಲ್ಸಿ ಸಪ್ಲಿಮೆಂಟರಿ ಪರೀಕ್ಷೆ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುತ್ತಿತ್ತು. ಪ್ರಸ್ತುತ ವರ್ಷ ಇದನ್ನು ಜೂನ್ ತಿಂಗಳಲ್ಲೇ ನಡೆಸಲು ಮಂಡಳಿ ತೀರ್ಮಾನಿಸಿದೆ. ದಂಡ ಸಹಿತ ಅರ್ಜಿ ಸಲ್ಲಿಸಲು ಮೇ 25 ಕಡೆ ದಿನಾಂಕ.
ಸುಮಾರು 13 ಸಾವಿರ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತಾಂತ್ರಿಕ ಕಾರಣಗಳಿಂದ ತಡೆ ಹಿಡಿಯಲಾಗಿದ್ದು , ಹಂತಹಂತವಾಗಿ ಬಹುತೇಕ ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶ ಈಗ ಹೊರಬಿದ್ದಿದೆ. ಮಂಗಳವಾರ ಉಳಿಕೆ ಇರುವ 1000 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗುವುದು ಎಂದು ಭಟ್ ಹೇಳಿದರು.
ಬುಧವಾರದ ಹೊತ್ತಿಗೆ ಯಾವುದೇ ಶಾಲೆಯ ವಿದ್ಯಾರ್ಥಿಗಳ ಫಲಿತಾಂಶ ದಕ್ಕದಿದ್ದಲ್ಲಿ, ಮಂಡಳಿಗೆ ಎಡತಾಕಬೇಕಾದ ಅಗತ್ಯವಿಲ್ಲ. ದೂರವಾಣಿ ಮುಖಾಂತರ ಸಂಪರ್ಕಿಸಿದರೆ ಸಾಕು. ಸಮಸ್ಯೆ ಬಗೆಹರಿಸಲಾಗುವುದು ಎಂದು ಭಟ್ ಭರವಸೆ ಕೊಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಶಿಕ್ಷಣ ಕಚೇರಿಗೆ ಮುತ್ತಿಗೆ : ಇಷ್ಟು ದಿನವಾದರೂ ಅನೇಕ ವಿದ್ಯಾರ್ಥಿಗಳ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಾರದ್ದಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಶ್ರಯದಲ್ಲಿ ಅವಳಿ ನಗರದ ನೂರಾರು ವಿದ್ಯಾರ್ಥಿಗಳು ಕ್ಷೇತ್ರ ಶಿಕ್ಷಣ ಇಲಾಖಾ ಕಚೇರಿಗೆ ಒಂದು ಗಂಟೆಗೂ ಹೆಚ್ಚು ಕಾಲ ಮುತ್ತಿಗೆ ಹಾಕಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications