ಜಿಂಬಾಬ್ವೆ ಪ್ರವಾಸಕ್ಕೆ ಭಾರತೀಯ ಕ್ರಿಕೆಟ್ ತಂಡದ ಪ್ರಕಟಣೆ
ಬೆಂಗಳೂರು : ಜಿಂಬಾಬ್ವೆ ವಿರುದ್ಧ ನಡೆಯಲಿರುವ ಎರಡು ಕ್ರಿಕೆಟ್ ಟೆಸ್ಟ್‌ಗಳ ಸರಣಿ ಪ್ರವಾಸಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿ.ಸಿ.ಸಿ.ಐ) 15 ಜನರ ತಂಡವನ್ನು ಗುರವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಕಟಿಸಿದೆ.
ಕರ್ನಾಟಕದ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಹಾಗೂ ರಾಹುಲ್ ದ್ರಾವಿಡ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರಾಹುಲ್ ದ್ರಾವಿಡ್ ಈ ಸರಣಿಗೂ ಉಪನಾಯಕರಾಗಿ ಆಯ್ಕೆ ಆಗಿದ್ದಾರೆ. ತಂಡದಲ್ಲಿ ಏಳು ಮಂದಿ ಬ್ಯಾಟ್ಸ್‌ಮನ್‌ಗಳು ಹಾಗೂ 7 ಮಂದಿ ಬೌಲರ್‌ಗಳಿದ್ದಾರೆ. ಸಮೀರ್ ದಿಘ ಅವರನ್ನು ಮಾತ್ರ ವಿಕೆಟ್ ಕೀಪರ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ಮೇ 24ರಂದು ರಾತ್ರಿ ಭಾರತೀಯ ತಂಡ ಜಿಂಬಾಬ್ವೆ ಪ್ರವಾಸಕ್ಕೆ ವಿಮಾನ ಏರಲಿದೆ. ವೆಸ್ಟ್ ಇಂಡೀಸ್ ಸೇರಿದಂತೆ ಈ ಪ್ರವಾಸ ಕಾಲದಲ್ಲಿ ನಡೆಯಲಿರುವ ತ್ರಿಕೋಣ ಸರಣಿಯ ಹಾಗೂ ಏಕದಿನದ ಪಂದ್ಯಗಳಿಗೆ ಜೂನ್ ಎರಡನೇ ವಾರದಲ್ಲಿ ತಂಡವನ್ನು ಪ್ರಕಟಿಸಲಾಗುವುದು.
ಈ ವಿಷಯವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿ ಜಯವಂತ ಲೆಲೆ ಅವರು ತಿಳಿಸಿದರು. ನಮ್ಮ ಆಟಗಾರರು ಶ್ರದ್ಧೆಯಿಂದ ಅಭ್ಯಾಸ ನಡೆಸಿದ್ದು, ಪ್ರವಾಸದಲ್ಲಿ ದಿಗ್ವಿಜಯ ಸಾಧಿಸುವರು ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಆಯ್ಕೆದಾರರು ವೇಗದ ಬೌಲರ್‌ಗಳ ಬಗ್ಗೆ ಒಲವು ತೋರಿದ ಹಿನ್ನೆಲೆಯಲ್ಲಿ ಮೊಹಂತಿ ತಂಡದಲ್ಲಿ ಸ್ಥಾನ ಗಿಟ್ಟಿಸಿದ್ದಾರೆ.
ತಂಡ ಇಂತಿದೆ - ಸೌರವ್ ಗಂಗೂಲಿ ( ನಾಯಕ), ರಾಹುಲ್ ದ್ರಾವಿಡ್ ( ಉಪ ನಾಯಕ), ಸಚಿನ್ ತಂಡೂಲ್ಕರ್, ವಿ.ವಿ.ಎಸ್. ಲಕ್ಷ್ಮಣ್, ಶಡಗೋಪನ್ ರಮೇಶ್, ಶಿವಸುಂದರ ದಾಸ್, ಹೇಮಾಂಗ್ ಬದಾನಿ, ಸಮೀರ್ ದಿಘ, ಜಾವಗಲ್ ಶ್ರೀನಾಥ್, ಅಜಿತ್ ಅಗರ್‌ಕರ್, ಜಾಹೀರ್ ಖಾನ್, ದೇಬಶೀಶ್ ಮೊಹಂತಿ, ಆಶಿಷ್ ನೆಹ್ರಾ, ಹರ್‌ಭಜನ್‌ಸಿಂಗ್ ಹಾಗೂ ಸಾಯಿರಾಜ್ ಬಹುತಲೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications