ಪ್ರಧಾನಿ ವಾಜಪೇಯಿ ಬಲ ಮೊಣಕಾಲಿಗೆಜೂನ್‌ನಲ್ಲಿ ಶಸ್ತ್ರ ಚಿಕಿತ್ಸೆ
ಬೆಂಗಳೂರು : ಜೂನ್ ತಿಂಗಳ ಮೊದಲ ವಾರದಲ್ಲಿ ಪ್ರಧಾನಿ ವಾಜಪೇಯಿ ಅವರ ಬಲ ಮೊಣಕಾಲಿನ ಶಸ್ತ್ರಚಿಕಿತ್ಸೆ ಮುಂಬಯಿಯಲ್ಲಿ ನಡೆಯಲಿದ್ದು , ಈ ಮೊದಲು ವಾಜಪೇಯಿ ಅವರ ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದ ಅನಿವಾಸಿ ಭಾರತೀಯ ಡಾ. ಚಿತ್ತರಂಜನ್ ರಣಾವತ್ ಅವರೇ ಈ ಬಾರಿಯೂ ಶಸ್ತ್ರಚಿಕಿತ್ಸೆ ನೇತೃತ್ವ ವಹಿಸುವರು.
ಮಲೇಷಿಯಾ ಭೇಟಿಯ ನಂತರ ಬುಧವಾರ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ವಿಶೇಷ ವಿಮಾನದಲ್ಲಿಯೇ ಪ್ರಧಾನಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಯನ್ನು ಮುಂಬಯಿಯ ಬ್ರೀಚ್‌ಕ್ಯಾಂಡಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಗಿದ್ದ ಸಂದರ್ಭದಲ್ಲಿಯೇ, ಬಲ ಮೊಣಕಾಲಿನ ಶಸ್ತ್ರಚಿಕಿತ್ಸೆಯ ಅವಶ್ಯಕತೆಯಿದೆಯೆಂದು ವೈದ್ಯರು ಪ್ರಧಾನಿಗೆ ತಿಳಿಸಿದ್ದರು.
ಲೋಕಸಭೆ ಮಧ್ಯಂತರ ಚುನಾವಣೆ ಸಾಧ್ಯತೆಗಳಿಲ್ಲ
ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ರಾಷ್ಟ್ರೀಯ ಪ್ರಜಾ ಸತ್ತಾತ್ಮಕ ಒಕ್ಕೂಟ ಹಿನ್ನಡೆ ಅನುಭವಿಸಿದ ಹಿನ್ನೆಲೆಯಲ್ಲಿ ಲೋಕಸಭೆಗೆ ಮಧ್ಯಂತರ ಚುನಾವಣೆ ನಡೆಯುವ ಯಾವುದೇ ಸಾಧ್ಯತೆಗಳನ್ನು ಪ್ರಧಾನಿ ವಾಜಪೇಯಿ ಸ್ಪಷ್ಟವಾಗಿ ತಳ್ಳಿಹಾಕಿದರು.
ಪ್ರಸ್ತುತದ ಚುನಾವಣೆಯಲ್ಲಿ ತಮ್ಮ ಪಾಲಿಗೆ ಲಾಭ- ನಷ್ಟ ಅನ್ನುವಂತದ್ದೇನೂ ಇಲ್ಲ . ಇದೊಂದು ಮಿಶ್ರ ಫಲಿತಾಂಶ. ಒಂದೆರಡು ಕ್ಷೇತ್ರಗಳಲ್ಲಿ ಹೆಚ್ಚಿನ ಸಾಧನೆ ಮಾಡಿದ್ದೂ ಉಂಟು ಎಂದು ಪ್ರಧಾನಿ 5 ರಾಜ್ಯಗಳ ಚುನಾವಣಾ ಫಲಿತಾಂಶವನ್ನು ಬಣ್ಣಿಸಿದರು. ಬರುವ ವರ್ಷ ನಡೆಯುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಸ್ಪರ್ಧೆಗಾಗಿ ನಾವು ಸನ್ನದ್ಧರಾಗಿದ್ದೇವೆ ಎಂದು ಅವರು ಆತ್ಮವಿಶ್ವಾಸದ ಮಾತುಗಳನ್ನಾಡಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications