ಮನಸ್ಸು ತಂಪು ಮಾಡಿದ ಮಳೆ ಬರುವ ಸುದ್ದಿ
ಬೆಂಗಳೂರು : ಬುಧವಾರ ರಾಜ್ಯದಲ್ಲಿ ಮಳೆ ಸುಳಿದಿಲ್ಲ. ಎಲ್ಲರೂ ಬಿಸಿಲ ಬಾಳೆಹಣ್ಣನ್ನೇ ಮೆಲ್ಲುತ್ತಿದ್ದಾರೆ. ಎಲ್ಲೆಲ್ಲೂ ಸೂರ್ಯನದೇ ಕಾರುಭಾರು. ತೆರೆದ ಬಾವಿಗಳಲ್ಲಿ ನೀರು ತಳ ಮುಟ್ಟಿದ್ದರೆ, ಕೊಳವೆ ಬಾವಿಗಳಲ್ಲಿ ನೀರಿಗಾಗಿ ಕೈಪೊಂಪಿನ ತಿದಿ ಒತ್ತಿ ಒತ್ತಿ ಜನ ಸುಸ್ತಾಗಿದ್ದಾರೆ.
ಮೊದಲಿನಂತೆ ಜಲ ಮಂಡಳಿ ಕೂಡ ಈಗ ಗಂಟೆಗಟ್ಟಲೆ ನೀರು ಬಿಡುತ್ತಿಲ್ಲ. ಸರಿ ಹೊತ್ತಿನಲ್ಲಿ ಬಿಡುವ ಹನಿ ನೀರಿಗೆ ಕಾಯುತ್ತಾ ಕುಳಿತುಕೊಳ್ಳುವ ಮಂದಿ, ನಿದ್ರೆಯನ್ನೂ ಹಾಳು ಮಾಡಿಕೊಳ್ಳುತ್ತಿದ್ದಾರೆ. ಬೇಸಿಗೆಯಲ್ಲೇ ಹೀಗೆ. ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆ ಆಗುತ್ತದೆ. ಅಂತರ್ಜಲ ಮಟ್ಟವೂ ಕುಸಿಯುತ್ತದೆ. ಒಟ್ಟಿನಲ್ಲಿ ಬೇಸಿಗೆ ಬಂತೆಂದರೆ ನೀರಿಗೆ ಹಾಹಾಕಾರ.
ಗ್ರಾಮೀಣ ಪ್ರದೇಶದ ಜನ ಅದರಲ್ಲೂ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ನೀರಿನ ಕ್ಷಾಮ ತೀವ್ರವಾಗಿದ್ದರೆ, ಇತ್ತ ಮಹಾ ನಗರಗಳಲ್ಲಿ ಪೆಪ್ಸಿ, ಕೋಲಾಗಳು ಸಾರ್ವಭೌಮತ್ವವನ್ನೇ ಮೆರೆಯುತ್ತಿವೆ.
ಈ ಮಧ್ಯೆ ರಾಜ್ಯದಲ್ಲಿ ಸಂಪೂರ್ಣವಾಗಿ ಒಣಹವೆ ಇತ್ತು. ರಾಜ್ಯದ ಗರಿಷ್ಠ ತಾಪಮಾನದಲ್ಲಿ ಸ್ವಲ್ಪ ಬದಲಾವಣೆ ಆಗಿತ್ತು. ದಕ್ಷಿಣ ಒಳನಾಡು, ಕರಾವಳಿಯಲ್ಲಿ ಅದು ಸಾಮಾನ್ಯ ಮಟ್ಟಕ್ಕಿಂತಲೂ ಹೆಚ್ಚಾಗಿತ್ತು. ರಾಜ್ಯದ ಅತಿ ಹೆಚ್ಚು ತಾಪಮಾನ ರಾಯಚೂರಿನಲ್ಲಿ 42 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಮುನ್ಸೂಚನೆಯ ಪ್ರಕಾರ ಒಳನಾಡಿನ ಕೆಲವೆಡೆ ಗುಡುಗಿನಿಂದ ಕೂಡಿದ ಸುರಿಮಳೆ ನಿರೀಕ್ಷಿತ. ಕರಾವಳಿಯಲ್ಲಿ ಒಣಹವೆ ಇರಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಸಂಜೆ ಅಥವಾ ರಾತ್ರಿ ಮಳೆ ಆಗುವ ಸೂಚನೆ ಇದೆ ಎಂದಿದೆ ಕೇಂದ್ರ ಹವಾಮಾನ ವೀಕ್ಷಣಾಲಯದ ವರದಿ. ಈ ವರದಿ ಕೇಳಿದ ಬೆಂಗಳೂರಿಗರ ಮನಸ್ಸು ಕೊಂಚ ತಣ್ಣಗಾಗಿದೆ. ಆದಾಗ್ಯೂ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎನ್ನುವುದು ಕೊಂಚ ಬೆವರಿಳಿಸಿದೆ ಅಷ್ಟೇ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications